Home Blog Left SidebarPage 36

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ಶೆಟ್ಟಿ ಆಯ್ಕೆ

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ. ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ

ಹಾಸನದಲ್ಲಿ ಡಿ.6 ರಂದು ಮುಖ್ಯಮಂತ್ರಿಗಳಿಂದ ತಾಲೂಕಿನ 3272 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆ ಸಚಿವರು ಭಾಗಿಆಲೂರು :ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶ ಡಿ.6 ರಂದು ಹಾಸನ ನಗರದಲ್ಲಿ ಜರುಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಇಲಾಖೆ ಸಚಿವರುಭಾಗವಹಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ತಿಳಿಸಿದರು ತಾಲೋಕು ಕಚೇರಿಯಲ್ಲಿ

ಕಾರ್ಮಿಕರು ದೇಶದ ಬೆನ್ನೆಲುಬು – ಶಾಸಕ ಸಿಮೆಂಟ್ ಮಂಜು

ಆಲೂರು: ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು  ಶಾಸಕ ಸಿಮೆಂಟ್ ಮಂಜು ಹೇಳಿದರು. ಗುರುವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ   ಬ್ರಿಡ್ಜ್ ಕೋರ್ಸ್ ತರಬೇತಿ  ಹಾಗೂ  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.ದುಶ್ಚಟಕ್ಕೆ ಬಲಿಯಾದ ವ್ಯಕ್ತಿಯ ಆರೋಗ್ಯ ಹಾಳಾಗುವುದಲ್ಲದೆ, ಅವರ ಕುಟುಂಬ ಮತ್ತು

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ನಿಂದ 83 ನೇ ಸೇವಾ ಯೋಜನೆ ಹಸ್ತಾಂತರ

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾನ ಪರಿಸರದ ಆನಂದ ಮುಗೇರ ಎಂಬವರ ಆರೋಗ್ಯದ ಸಮಸ್ಯೆಗೆ ಸ್ಪಂದಿಸಿರುವ ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ಅಮನಬೆಟ್ಟು ಚಿಕಿತ್ಸೆಗಾಗಿ 83ನೇ ಸೇವಾ ಯೋಜನೆಯ ನವೆಂಬರ್ ತಿಂಗಳ ಎರಡನೇ ಯೋಜನೆಯ ರೂ. 10,000ದ ಚೆಕ್ಕನ್ನು ಡಿಸೆಂಬರ್ 1ರಂದು ಹಸ್ತಾಂತರಿಸಿದೆ. 43ವರ್ಷ ಪ್ರಾಯ ದ ಆನಂದ ಮುಗೇರ ಅವರು ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇದುವರೆಗೆ ಸುಮಾರು ಹಣವನ್ನು ಖರ್ಚು ಮಾಡಲಾಗಿದೆ. ಈಗ ಮಂಗಳೂರು ನಲ್ಲಿ ಚಿಕಿತ್ಸೆ

ಸರಕಾರಿ ಕಛೇರಿಗಳಿಗೆ ಸಂವಿಧಾನ ಪೀಠಿಕೆಯ ಭಾವಚಿತ್ರ ವಿತರಣೆ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ,

ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆ ಆರೋಪ ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ -ಸೇವೆಯಿಂದ ಅಮಾನತು

ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ

ಬಿಳಿನೆಲೆ: ಯುವತಿ ಚೈತನ್ಯ (19) ಅಸೌಖ್ಯದಿಂದ ನಿಧನ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದ ಚೈತನ್ಯ ಅವರು ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ದರು.

ಕಾಪು ಶಾಸಕರಿಂದ ತಾಲೂಕು ವ್ಯಾಪ್ತಿಯ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43 ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿಗಳನ್ನು ಸಕ್ಷಮ ಅಧಿಕಾರಿಗಳ ಎದುರಿನಲ್ಲಿ ಇತ್ಯರ್ಥ

ದೇರಳಕಟ್ಟೆ: ಕ್ಲಾಕ್ ಟವರ್ ಉದ್ಘಾಟನೆ

 ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ‘ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕಣಚೂರು ಸಂಸ್ಥೆಯ ಮೆಡಿಕಲ್ ಆಫೀಸರ್ ಡಾ. ರೋಹನ್ ಮೋನಿಸ್ ಮತ್ತಿತರರು ಉಪಸ್ಥಿತರಿದ್ದರು.