Home Blog Left SidebarPage 368

ಮಂಜೇಶ್ವರ: ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಡ್ರಗ್ಸ್ ಜಾಗೃತಿ ಶಿಬಿರ

ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್‍ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್

ರಾಜ್ಯದಲ್ಲಿರುವುದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ : ನಳಿನ್ ಕುಮಾರ್ ಕಟೀಲ್

ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ

ನೆಲ್ಯಾಡಿ: ಕೊಣಾಲು ಸಂತ ತೋಮಸರ ದೇವಾಲಯದಲ್ಲಿ ಸಂಭ್ರಮದ ಕೊಯಿನೋನಿಯ 2023 ಆಚರಣೆ

ನೆಲ್ಯಾಡಿ: ಕೊಣಾಲು ದಿಯುವಾಂಜಲಿಸ್ಟಿಕ್ ಅಸೋಸಿಯೇಷನ್ ಆಫ್ ದ ಈಸ್ಟ್ ಇದರ ಅದೀನದಲ್ಲಿರುವ ಸಂತ ತೋಮಸ್ ಯಾಕೋಬಾಯ ಸುರಿಯಾನಿ ಚರ್ಚಿನಲ್ಲಿ ತಾಯಂದಿರಿಗೋಸ್ಕರ ಕೊಯಿನೋನಿಯಾ ಮದರ್ಸ್ ಡಿವೋಷನಲ್ ಫೆಲೋಶಿಪ್ ಕಾರ್ಯಕ್ರಮ ಮರ್ತ ಮರಿಯಾಮ್ ಮಹಿಳಾ ಸಮಾಜದ ನಿರ್ದೇಶಕರಾಗಿರುವ ವೆರಿ.ರೇ. ಪಿ.ಕೆ ಅಬ್ರಹಾಂ ಕೋರ್ ಎಪಿಸ್ಕೋಪೋ ಅವರ ನಿರ್ದೇಶನದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೋಮೊಸರ ದೇವಾಲಯದ ವಿಕಾರ್ ಆಗಿರುವ ರೇ.ಫಾ.ಅನೀಶ್ ಪಾರಾಶೆರಿಲ್

ವಾಸ ಮತ್ತು ಹೂಡಿಕೆಗೆ ಸೂಕ್ತ ಆಯ್ಕೆ – ಸನ್‍ಶೈನ್ ಸ್ಯಾಪ್ಲಿಂಗ್

ಉತ್ಕೃಷ್ಟ ಗುಣಮಟ್ಟದ ಕಾಮಗಾರಿ, ವಿಶಾಲ ಹಸಿರು ವಲಯ, ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆಯ ಜೊತೆಗೆ ಸುಸಜ್ಜಿತ ಸನ್‍ಶೈನ್ ಸ್ಯಾಪ್ಲಿಂಗ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಅಕ್ಟೋಬರ್ 15 ರಿಂದ 24ರ ಸೀಮಿತ ಅವಧಿಗೆ ಆದ್ಯತೆಯ ಮೇರೆಗೆ ಅಪಾರ್ಟ್‍ಮೆಂಟ್ ಖರೀದಿಯ ಮೇಲೆ 10% ವಿಶೇಷ ಹಬ್ಬದ ರಿಯಾಯತಿಯನ್ನು ಘೋಷಿಸಲಾಗಿದೆ ಎಂದು ಸನ್‍ಶೈನ್ ಮಲ್ಟಿವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಮಾಹಿತಿ ನೀಡಿದೆ.

🛑ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ, ಲಾರಿ ಸಮೇತ ಸೊತ್ತು ವಶ

ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಎನ್.ಎಚ್. 75ರ ಲಾವತ್ತಡ್ಕ ಎಂಬಲ್ಲಿ ಅಕ್ರಮವಾಗಿ ಅಕೇಶಿಯಾ ಉರುವಲು ಸಾಗಾಟ ಮಾಡುತ್ತಿದ್ದ ಕೆಎ21 ಬಿ 3478 ಸಂಖ್ಯೆಯ ಲಾರಿಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ರವರ ಮಾರ್ಗದರ್ಶನದಲ್ಲಿ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೊಕ್ಕಡ ಸಾಹುಲ್ ಹಮೀದ್ ಪರಾರಿಯಾಗಿದ್ದಾನೆ. ರೆಖ್ಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತದಲಗಿ, ಬೀಟ್ ಫಾರೆಸ್ಟರ್‌ಗಳಾದ ನಿಂಗಪ್ಪ ಅವರಿ, ಸುನೀಲ್ ನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.

ಮಂಗಳೂರು: ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್

ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್‍ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೆÇಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೆÇಲೀಸ್

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು-ಇರುವೈಲು ಗ್ರಾಮಸಭೆ ರದ್ದು

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ನಡೆದಿದೆ. ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ ತೋಡಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಅರಣ್ಯ ಇಲಾಖೆಯ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (೨೩) ಮೃತಪಟ್ಟ ಯುವತಿ. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ

ಬ್ರಹ್ಮಾವರ: ಒಂದು ತಂತಿಯಿಂದ ನಾದ ಹೊರಹೊಮ್ಮಿಸುವ ಕಿಂದರಜೋಗಿ

ದಸರಾ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕರಾವಳಿ ಭಾಗಕ್ಕೆ ಬಂದು ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜನರನ್ನು ಬೆರಗುಗೊಳಿಸುತ್ತಿದ್ದರು. ಇದೀಗ ದಾವಣಗೆರೆ ಮೂಲದ ಭೈರಪ್ಪ ಅವರು ಕರಾವಳಿ ಭಾಗಕ್ಕೆ ಆಗಮಿಸಿದ್ದು, ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜೀವನದ ಮೌಲ್ಯವನ್ನು ಬಿತ್ತರಿಸುವ ಕಾಯಕಕ್ಕೆ ಮುಂದಾಗಿದ್ದಾರೆ. 4 ಅಡಿ ಉದ್ದದ ಬಿದಿರಿನ ದಂಡವೊಂದಕ್ಕೆ 3 ಸ್ಥರದ ಸೋರೆ ಕಾಯಿ ಬುರುಡೆಗೆ ತಂತಿಯೊಂದನ್ನು ಅಳವಡಿಸಿ ಹಾಡು ಹಾಡುವಾಗ ಸ್ವರ ತಂತುಗಳು ತಂತಿ ಮೂಲಕ

ಕಡಬ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ ಜಾಥಾಕ್ಕೆ ಚಾಲನೆ

ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಡಬದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸ,ಪ.ಪೂ.ಕಾಲೇಜು ಕಡಬ ,ತಾಲೂಕು ಯುವಜನ ಒಕ್ಕೂಟ ಕಡಬ, ತಾ.ಪಂ.ಕಡಬ ,ಪಟ್ಟಣ