ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್‌ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು
ಬರಗಾಲದ ಹಿನ್ನಲೆಯಲ್ಲಿ ಉಚ್ಚಿಲ ದಸರಾ ವಿಜ್ರಂಭಣೆಯಾಗಿ ಅಲ್ಲವಾದರೂ ಎಲ್ಲೂ ಯಾವುದಕ್ಕೂ ಚ್ಯುತಿ ಬಾರದಂತೆ ವ್ಯವಸ್ಥಿತವಾಗಿ ನಡೆಯಲಿದೆ ಎಂಬುದಾಗಿ ನಾಡೋಜ ಜಿ. ಶಂಕರ್ ಹೇಳಿದ್ದಾರೆ.ಅವರು ಉಚ್ಚಿಲ ಮೊಗವೀರ ಸಭಾಗಣದಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಉಚ್ಚಿಲ ದಸರಾವನ್ನು ಉಡುಪಿ ಜಿಲ್ಲಾಧಿಕಾರಿಯವರು ಉದ್ಘಾಟಿಸಲಿದ್ದು, ಕಳೆದ ಬಾರಿಯಂತೆ ಹೆಲಿಕಾಪ್ಟರ್ ಬಳಕೆ ಇಲ್ಲವಾದ ಕಾರಣ ಮೈಸೂರು ಅಂಭಾರಿಯನ್ನು ಹೊಲುವ ರೀತಿಯಲ್ಲಿ ಆನೆಯ ಪ್ರತಿಕೃತಿ ಬಹಳ
ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆ 1914ರಲ್ಲಿ
ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ವಿಶ್ವಾದಾದ್ಯಂತ ಆಚರಿಸಿ ಜನರಲ್ಲಿ “ಮಾನಸಿಕ ಆರೋಗ್ಯದ ಅನಿವಾರ್ಯತೆ” ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ವಿಶ್ವ ಮಾನಸಿಕ ಸಂಸ್ಥೆ ಮಾಡುತ್ತದೆ. 2018 ರಲ್ಲಿ “ಯುವ ಜನರು ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ಎಂಬ ತಿರುಳನ್ನು ಇಟ್ಟುಕೊಂಡು ಆಚರಣೆ ಮಾಡಲಾಗಿದೆ. 2019ರಲ್ಲಿ “ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಯುವಿಕೆ’’ ಎಂಬ ದ್ಯೇಯ ವಾಕ್ಯದೊಂದಿಗೆ ಆಚರಣೆ
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು. ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು,
ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ತಿಳಿದು ಬಂದಿದೆ. ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ಬಳಿಕ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ವಿರುದ್ಧ ಯುದ್ಧ ಘೋಷಿಸಿತು. ಮೂರು ದಿನಗಳ ಸಂಘರ್ಷವು ಈಗಾಗಲೇ ಎರಡೂ ಕಡೆಗಳಲ್ಲಿ 1,100 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದ್ದು,
ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರ ಕಳೆದ 9 ವರ್ಷಗಳಲ್ಲಿ ನಿರಂತರವಾಗಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಯವರ ಕೈಗೊಪ್ಪಿಸಿ ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದೆ.ಇಂತಹ ಜನದ್ರೋಹಿ ಸರಕಾರ ಮತ್ತೆ ಅಧಿಕಾರಕ್ಕೇರಿದರೆ ದೇಶದ ಸ್ವಾತಂತ್ರ್ಯ ಸಮಗ್ರತೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಕಟ್ಟಿಟ್ಟ
ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ
ವಿಶ್ವ ಹಿಂದೂ ಪರಿಷತ್‍ನ 60ನೇ ವರ್ಷದ ಪ್ರಯುಕ್ತ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಶೌರ್ಯ ಜಾಗರಣ ರಥಯಾತ್ರೆ ಇಂದು ಬೆಳಗ್ಗೆ ಮಂಗಳೂರು ಪ್ರವೇಶಿಸಿದ್ದು ಅಡ್ಯಾರ್‍ನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಈ ವೇಳೆ ವಿಎಚ್ ಪಿಯ ಶರಣ್ ಪಂಪ್ ವೆಲ್, ಪುರುಷೋತ್ತಮ್, ಎಂ.ಬಿ ಪುರಾಣಿಕ್ ಮೊದಲಾದವರು ಉಪಸ್ಥಿತರಿದ್ದರು. ಅಪರಾಹ್ನ 2.30ಕ್ಕೆ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದ ವರೆಗೆ ಭವ್ಯವಾದ ಶೋಭಾಯಾತ್ರೆ ನಡೆಯಲಿದ್ದು, ವಿವಿಧ ಟ್ಯಾಬ್ಲೋಗಳು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಎರಡು ದಿನಗಳು ನಡೆದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 13ನೇ ಆವೃತಿಯಲ್ಲಿ 1,871 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲಿಯೇ ನೇಮಕಗೊಂಡಿದ್ದಾರೆ. ಭಾಗವಹಿಸಿದ ಒಟ್ಟು 198 ಕಂಪನಿಗಳ ಪೈಕಿ 174 ಕಂಪನಿಗಳು, 3,259 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 2,284 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 10,252 ಅಭ್ಯರ್ಥಿಗಳು ಭಾಗವಹಿಸಿದರು.




























