Home Blog Left SidebarPage 374

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ. ಈ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೈವಗಳ ನರ್ತನ ದೈವದ ಕೊಡಿಯಡಿಯಲ್ಲೇ ನಡೆಯಬೇಕು

ಅರಸೀಕೆರೆ: ಋಷಿಮುನಿಗಳು ಉಪಯೋಗಿಸುವ ಪಾದುಕೆ, ಕಮಂಡಲ ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28 ಕಮಂಡಲಗಳು ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯನ್ನು ವೀಕ್ಷಿಸಲು ಜನರು ಸಾಲು ಸಾಲಾಗಿ ಬರುತ್ತಿದ್ದರು.

ಅಮೇರಿಕಾದಲ್ಲಿ ಕೋಟದ ಕುವರಿ ಅದಿತ್ರಿ ಪೈಯಿಂದ ಕಾಂತಾರ ಸಿನಿಮಾ ಹಾಡು

ಉಡುಪಿ ಜಿಲ್ಲೆ ಕೋಟ ಮೂಲದ 10 ವರ್ಷದ ಕುವರಿ ಅದಿತ್ರಿ ಪೈ ಅಮೇರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂತಾರ ಸಿನಿಮಾ ಹಾಡು ಹಾಡಿ ಜನಮೆಚ್ಚುಗೆ ಪಡೆದಿದ್ದಾಳೆ. ಅಮೇರಿಕಾದ ಒಹಾಯೋ ರಾಜ್ಯದ ಲೈಮಾದಲ್ಲಿ ಮಲ್ಟಿ ಕಲ್ಚರಲ್ ಎಕ್ಸ್ ಪೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡಿನ ಟ್ಯಾಕ್‍ಗೆ ಶಾಸ್ತ್ರೀಯ ರಾಗದ ಕನ್ನಡ ಗೀತೆಯೊಂದನ್ನು ಅದಿತ್ರಿ ಪೈ ಸ್ವರ ಮಾಧುರ್ಯದಿಂದ ಹಾಡಿ ಜನಮೆಚ್ಚುಗೆ ಗಳಿಸಿದ್ರು. ಅಮೇರಿಕಾದಲ್ಲಿ ಮೆಕ್ಯಾನಿಕಲ್

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ಗೆ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ” ಪ್ರಶಸ್ತಿ

ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್ ನ ಡೆಲ್ಟಿನ್ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ವಾರ್ಷಿಕ ಶೃಂಗಸಭೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಒಂದು ಕ್ಷಣ ಪುಟ್ಟ ಮಕ್ಕಳ ಜತೆ ಮಕ್ಕಳಾಗಿ ಹೋದ್ರು ಪೊಲೀಸ್  ಕಮಿಷನರ್

ಪೊಲೀಸ್ ಠಾಣೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆಯುವ ಮಕ್ಕಳಿಗೆ ಲವಲವಿಕೆಯಿಂದ ಕೂಡಿದ ವಾತಾವರಣವನ್ನು ಕಲ್ಪಿಸುವುದು   ಪೊಲೀಸ್   ಅಂದಾಗ ಮಕ್ಕಳ ಮನಸಿನಲ್ಲಿ ಮೂಡುವ ಭಾವನೆಗಳು  ಬೇರೆ ಬೇರೆಯ ಪ್ರಶ್ನೆಗಳು ಮೂಡಿಬರುವುದು  ಬಹಳಷ್ಟಿದೆ.  ಇಲ್ಲಿ  ಪೊಲೀಸ್ರು ಅಂದಾಗ ಭಯ ಪಡುವ ದೃಷ್ಟಿಕೋನ ದೂರ ಅಗಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳ ಜತೆ ಒಂದೊತ್ತು ಕಾಲ ಕಳೆದು  ಮಕ್ಕಳ ಜತೆ  ಮಕ್ಕಳಾಗಿ   ಹೋದ್ರು

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ

ದಿನಾಂಕ: 05-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ. ಹಾಕೆ , ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆಯಲ್ಲಿ ಕೆಲಸ ಮಾಡುವ

ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ

ಅಸೈಗೋಳಿ ಅಭಯ ಆಶ್ರಮದ ವಾಸಿಗಳಿಗೆ ಅನ್ನದಾನ

ಕೋಟೆಕಾರು ಅಯ್ಯಪ್ಪ ಮಂದಿರದ ಗರುಸ್ವಾಮಿ ದಿವಂಗತ ಪ್ರಭಾಕರನ್ ಅವರ ಸ್ಮರಣಾರ್ಥ ವಿಷನ್ ಕುಡ್ಲದ ವತಿಯಿಂದ ಅಸೈಗೋಳಿಯಲ್ಲಿರುವ ಅಭಯಾಶ್ರಮದ ವಾಸಿಗಳಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿಷನ್ ಕುಡ್ಲದ ಅಧ್ಯಕ್ಷರಾದ ಜಿತೇಂದ್ರ, ಕಾರ್ಯದರ್ಶಿ ಸಂತೋಷ್ ಕುಮಾರ್, ಖಜಾಂಜಿ ರಾಮಚಂದ್ರ, ಉದಯ ಕುಮಾರ್, ಪ್ರಸನ್ನ, ಪ್ರವೀಣ್ ಮಯ್ಯ, ಪ್ರದೀಪ್, ಲೈನಲ್, ಅಭಯಾಶ್ರಮದ ಕಾರ್ಯದರ್ಶಿ ರವಿ ಕುಮಾರ್ ರೈ ಅವರು ಉಪಸ್ಥಿತರಿದ್ದರು.