ಶ್ರೀ ದೈವರಾಜ ಬಬ್ಬುಸ್ವಾಮಿ ಶ್ರೀ ಕಲ್ಪವೇದಿಕೆ ಬಲಿಪತೋಟ ಇದರ ವತಿಯಿಂದ 4ನೇ ವರ್ಷದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಭಾರತೀನಗರದ ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆಯಿತು. ಕೊಡಿಯಾಲ್‍ಗುತ್ತು ಪ್ರಸಾದ್ ಅಸೋಸಿಯೇಟ್ಸ್‍ನ ಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು
ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶವು ಕಾರ್ಕಳದ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯ ಚಂದ್ರ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅಭಯಚಂದ್ರ ಜೈನ್ ಅವರು, ನಾವಿಂದು ಗಾಂಧಿ ಜಯಂತಿಯನ್ನು ಬಹು ವಿಜೃಂಭಣೆಯಿಂದ ಆಚರಿಸಿದ್ದೇವೆ. ಅದೇ ರೀತಿ ಮಹಾತ್ಮ ಗಾಂಧಿಯವರು ಭಾರತವನ್ನು
ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ವಾಹನಗಳ ಮಾಲಕರು ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದು, 7ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಮುಷ್ಕರ ನಿರತರು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರಿ ಅವರ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕೋಟದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ಮಾತುಕತೆ ನಡೆಸಿದರು. ಟಿಪ್ಪರ್ ಮಾಲಕರ ಸಂಘದ ವಿಜಯ ಕುಮಾರ್,
ಪುತ್ತೂರು: ರಾಜ್ಯ ಸರಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರೋಧವಾಗಿ ನಡೆಯುತ್ತಿದೆ ಮತ್ತು ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‍ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ವುಮೆನ್ಸ್ ಇಂಡಿಯಾ ಮೂವುಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ ಅವರು ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಸರಿದೂಗಿಸಲು ಮದ್ಯಪಾನ
ಸುವರ್ಣ ಮಹೋತ್ಸ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡರು. ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಇರಾ ಸಂಪಿಲದ ಬಿಲ್ಲವ ಭವನದ ವರೆಗೆ ಪ್ಲಾಸ್ಟಿಕ್, ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್ ಸದಸ್ಯರಾದ ಎಮ್.ಡಿ. ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್, ಪಂಚಾಯತ್ ಕಾರ್ಯದರ್ಶಿ ದಿನೇಶ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲ್, ಉಪಾಧ್ಯಕ್ಷರಾದ
ಕುಂದಾಪುರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ (42) ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ
ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ ಮಂಜುರಾತಿಯನ್ನು ರದ್ದು ಮಾಡುವ ಬಗ್ಗೆ ಗ್ರಾಮಸ್ಧರಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್ ಮಾತನಾಡಿ ಕಿನ್ನಿಗೋಳಿ
ಕೊಕ್ಕಡ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಾದ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮದಡಿ ಶಿಶಿಲ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಉಪಾಧ್ಯಕ್ಷ ಯತೀಶ್ ಯಳಚಿತ್ತಾಯ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಆಟೋ ಚಾಲಕ ವೃಂದ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಅಂಗಡಿ ಮಾಲಕರು, ಹಾಗೂ ಸ್ಥಳೀಯ ನಿವಾಸಿಗಳು ಸ್ವಚ್ಛತಾ ಕಾರ್ಯದಲ್ಲಿ
ಭಾರೀ ಮಳೆ ಸುರಿದ ಪರಿಣಾಮ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ ಉರುಳಿ ಕೆಲ ಸಮಯ ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಿಡ್ಲೆಯಿಂದ ಪಟ್ರಮೆಗೆ ಸಂಪರ್ಕಿಸುವ ರಸ್ತೆಯ ಸುರ್ಯತ್ತಾವು ಸಮೀಪ ಸಂಭವಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕಳೆಂಜ ಶೌರ್ಯ ತಂಡದ ಸ್ವಯಂಸೇವಕರು ಮರವನ್ನು ತೆರವುಗೊಳಿಸಿ ಮೆಸ್ಕಾಂ ಇಲಾಖೆಗೆ ಸಹಕರಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು. ಕಾರ್ಯಾಚರಣೆಯಲ್ಲಿ ಕಳೆಂಜ ವಲಯದ ಸಂಯೋಜಕ ಗಿರೀಶ್, ಸದಸ್ಯರಾದ
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾವೂರು ಇದರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಂಗಲಾ ರಾವ್ ವಹಿಸಿ ಮಾತನಾಡಿ, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯದಲ್ಲಿ ಅಂಗನವಾಡಿ ಕೇಂದ್ರದ ಪ್ರಾಮುಖ್ಯತೆಯ ಬಗ್ಗೆ




























