Home Blog Left SidebarPage 379

ನಿಟ್ಟೆ ವಿವಿಯಿಂದ ಡಬ್ಲ್ಯುಎಫ್‌ಎಂಇ ಅಧ್ಯಕ್ಷರಿಗೆ ಸನ್ಮಾನ

ಮಂಗಳೂರು – ಅಮೆರಿಕದ ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (ಡಬ್ಲ್ಯುಎಫ್‌ಎಂಇ) ಅಧ್ಯಕ್ಷ ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ವತಿಯಿಂದ ಸನ್ಮಾನಿಸಲಾಯಿತು. ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ದಾಳಿ ಪ್ರಕರಣಕ್ಕೆ ನಳಿನ್ ಕುಮಾರ್ ಕಟೀಲ್ ಖಂಡನೆ

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ

ಯುವರಾಜ ಜೈನ್ ಗೆ ಗ್ಲೋಬಲ್ ಎಂಬಾಸಿಡೆರ್ ಆಫ್ ಎಜುಕೇಶನ್ ಎಕ್ಸಲೆನ್ಸ್ ಪ್ರಶಸ್ತಿ

ಮೂಡುಬಿದಿರೆ : “ಅಂತಾರಾಷ್ಟ್ರೀಯ ಎಜುಕೇಶನ್ ಎಂಡ್ ಮ್ಯಾನೇಜ್ಮೆಂಟ್ ಸಂಸ್ಥೆ”ಕೊಡಮಾಡುವ ಪ್ರತಿಷ್ಠಿತ “ಗ್ಲೋಬಲ್ ಎಂಬಾಸಿಡೆರ್ ಆಫ್ ಎಜುಕೇಶನ್ ಎಕ್ಸಲೆನ್ಸ್ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಇವರಿಗೆ ನೀಡಿ ಗೌರವಿಸಿತು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿ ಕಳೆದ ಮೂರು ದಶಕಗಳಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಮೂಲಕ ಗುರುಕುಲ ಮಾದರಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಾ

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ವಿಶೇಷ ಆಫರ್

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್..!?…: ‘ಶಾಪ್&ಚಿಲ್’ ಗೇಮ್ಸ್ ಮೂಲಕ ಪ್ರತಿ 5 ನಿಮಿಷಕ್ಕೆ ಆಕರ್ಷಕ ಬಹುಮಾನಗಳ ಸುರಿಮಳೆ… ಇನ್ನಂತೂ ಹಬ್ಬಗಳ ಸೀಸನ್.. ನಿಮ್ಮ ಹಬ್ಬದ ಸಂಭ್ರಮವನ್ನ ಇನ್ನಷ್ಟು ಇಮ್ಮಡಿಗೊಳಿಸಲು, ಪುತ್ತೂರಿನಲ್ಲಿ ಕಾರ್ಯಚರಿಸ್ತಾ ಇರುವ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯು ವಿಶೇಷ ಭರ್ಜರಿ ಆಫರ್‌ಗಳನ್ನು ನೀಡ್ತಾ ಇದೆ. ಹೌದು..121 ದಿನಗಳ ಬಿಗ್ ಫೆಸ್ಟಿವಲ್ ಸೀಸನ್ ಸೇಲ್ ಇದೇ ಬರುವ

ಪಡುಬಿದ್ರಿ: ಬೀಚ್‌ನಲ್ಲಿ ಸ್ವಚ್ಚತಾ ಪಕ್ವಾಡ ಅಭಿಯಾನ ಕಾರ್ಯಕ್ರಮ

ಪಡುಬಿದ್ರಿಯ ಮುಖ್ಯ ಬೀಚ್‌ನಲ್ಲಿ ವಿಶ್ರುದ್ ಕೋಸ್ಟಲ್ ಡೆವಲಪರ್ಸ್ ವತಿಯಿಂದ  ಸ್ವಚ್ಚತಾ ಪಕ್ವಾಡ್ ಅಭಿಯಾನ ಕಾರ್ಯಕ್ರಮ ನಡೆಯಿತು. ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಿ.ಎಸ್.ಬಿ ಸಿಬ್ಬಂದಿಗಳು ಸಹಿತ ಸಾರ್ವಜನಿಕರ ಸಹಕಾರದಿಂದ ಕಾರ್ಯಕ್ರಮ ಉತ್ತಮವಾಗಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಪ್ರವಾಸೋದ್ಯಮ ಇಲಾಖಾ ಸಹಾಯಕ ನಿರ್ದೇಶಕ ಕುಮಾರ ಪಿ.ಯು., ಸ್ವಚ್ಚತೆ ಎಂಬುದು ನಮ್ಮೆಲ್ಲಾರ ಜವಾಬ್ದಾರಿ,

ಮಂಗಳೂರು: ಬಿಎನ್‍ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್ ಪೋ – 2023ಕ್ಕೆ ಚಾಲನೆ

ಬಿಎನ್‍ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್‍ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬಿಎನ್‍ಐ ಮಂಗಳೂರು ಬಿಸ್‍ನೆಸ್ ನೆಟ್ವರ್ಕ್‍ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ 3.11 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಉದ್ಯಮಿಗಳಿಗೆ ನೆಚ್ಚಿನ ವ್ಯಾಪಾರ ಜಾಲವಾಗಿದೆ. ಮಂಗಳೂರಿನ ಆಯ್ದ ವ್ಯವಹಾರಗಳಿಗೆ

ಕಡಬ: ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಪರಿಶೀಲನೆ

ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಕೋಕಲಾ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ನಂತರ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿದರು. ಮನೆಯಲ್ಲಿ ಚೋಮ ರವರ ಪತ್ನಿಯ ಜೊತೆ ಮಾತನಾಡಿ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಹೇಳಿದರು.

ಬೈಂದೂರು : ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಲಾರಿ, ಟೆಂಪೋ ಚಾಲಕರ ಮುಷ್ಕರ

ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ 3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬೈಂದೂರು ಯಡ್ತರೆ ಸರ್ಕಲ್‍ನಲ್ಲಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಯುತ್ತಿದೆ. ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ, ಈ ವರೆಗೆ ಇಲ್ಲದ

ವಿಟ್ಲ: 40 ಅಡಿ ಅಳದ ಹೊಳೆಗೆ ಬಿದ್ದ ವ್ಯಕ್ತಿಯ ರಕ್ಷಣೆ

ವಿಟ್ಲ: ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಮುಂಜಾನೆ 4ಗಂಟೆ ಸುಮಾರಿಗೆ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು. ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ