Home Blog Left SidebarPage 38

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ

ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾತಿ೯ ಧನಲಕ್ಷ್ಮೀ ಪೂಜಾರಿಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾರ್ತಿ, ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಧನಲಕ್ಷ್ಮಿ ಪೂಜಾರಿಯವರಿಗೆ ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ಶನಿವಾರ ಭವ್ಯವಾದ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದ.ಕ ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಸ್ವಾಗತಿಸಿ, ಅಭಿನಂದಿಸಿದರು. ಬಳಿಕ ಎಡಪದವಿನಲ್ಲಿ ವಿವೇಕಾನಂದ ಪಿಯು ಕಾಲೇಜು

ಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್  ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ

ನೈಋತ್ಯ ವಲಯ ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ಗೆ ಪ್ರಥಮಸ್ಥಾನ

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎ ಐ ಸಿ ಟಿ ಇ, ನವದೆಹಲಿ, ಎಂ. ಒ. ಇ. ಇನ್ನೊವೇಶನ್ ಸೆಲ್ ಇವುಗಳ ಸಹಯೋಗದಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೈಋತ್ಯ ವಲಯದ ಇನ್ಸ್ಟಿಟ್ಯೂಷನ್ಸ್ ಇನ್ನೊವೇಶನ್ ಕೌನ್ಸಿಲ್ ನ ಪ್ರಾದೇಶಿಕ ಸಮ್ಮೇಳನದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಐಐಸಿ ಚಟುವಟಿಕೆಗಳನ್ನು ಬಿಂಬಿಸುವ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಮೂಡಬಿದಿರೆಯ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ನ ಅಂತಿಮ

ಡಿ. 20 ರಂದು ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025”-ಬೆಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆ

WENAMITAA (NMAMIT Alumni Association) ಮತ್ತು ನಿಟ್ಟೆ ಮಹಾಲಿಂಗ ಅಡಿಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT), ನಿಟ್ಟೆ — ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025” ಅನ್ನು 20 ಡಿಸೆಂಬರ್ 2025 ರಂದು, ಸಂಜೆ 4 ಗಂಟೆಯಿಂದ ಆರಂಭವಾಗಿ, ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪೂರ್ವಸಭೆಯನ್ನು ಇಂದು ಬೆಂಗಳೂರಿನ ರಿಚ್ಮಂಡ್ ಸರ್ಕಲ್‌ನ ಹೋಟೆಲ್

ಅಂತರಾಷ್ಟ್ರೀಯ ಮಟ್ಟದ ಕರಾಟೆ : ಪ್ರಶಾಂತ್ ಬಿ. ಶೆಟ್ಟಿಗೆ ಚಿನ್ನ, ಮುಬೀನತುಲ್ ಅಸ್ಮಿಯಾಗೆ ಬೆಳ್ಳಿ

ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಮೂಡುಬಿದಿರೆಯ

ರೋಹನ್ ಕಾರ್ಪೊರೇಶನ್ ವತಿಯಿಂದ ಆರೋಗ್ಯ ಇಲಾಖೆಗೆ 100 ಟಾರ್ಚ್‌ಗಳ ವಿತರಣೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ

ಮಂಗಳೂರಿಗೆ ಪ್ರಧಾನಿ ಆಗಮನ

ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ