ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ
ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಮುಖ್ಯ ರಸ್ತೆಯಲ್ಲಿ ಸುಮಾರು 20 ದಿನಗಳಿಂದ ಒಳ ಚರಂಡಿಯ ನೀರು ಹರಿಯುತ್ತದೆ. ಈ ನೀರು ದುರ್ವಾಸನಿಂದ ಕೂಡಿದ ಪರಿಣಾಮ ಸ್ಥಳೀಯ ವಸತಿ ಸಂಕೀರ್ಣದಲ್ಲಿ ವಾಸಿಸುವ ಜನತೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ಅದಲ್ಲದೆ ಪಕ್ಕದಲ್ಲಿ ಕ್ರೈಸ್ ಕಿಂಗ್ ಚರ್ಚ್ ಹಾಗೂ ಕಾನ್ವೆಂಟ್ ಮತ್ತು ಸಾವಿರಾರು ಮಕ್ಕಳು ಓದುತ್ತಿರುವ ಶಾಲೆಯೂ ಇದೆ. ಎಲ್ಲರೂ ಈ ತ್ಯಾಜ್ಯ ನೀರಿನ ದುರ್ವಾಸನೆಯನ್ನು ಸಹಿಸಿಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ.
ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು
ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ತೆಂಕ ಎರ್ಮಾಳು ನಿವಾಸಿಗಳಾದ ದೀರಜ್ ಹಾಗೂ ಅವರ ಪತ್ನಿ ಪವಿತ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ಅದರ ಚಾಲಕ ಅತೀ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಪರಿಣಾಮ ಕಟಪಾಡಿ ಪೇಟೆ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವನ್ನು ಏರಿ ನಂತರ ದ್ವಿಚಕ್ರ ವಾಹನಕ್ಕೆ
ಮೂಡುಬಿದಿರೆ: ಮೆಕ್ಕಾ ಮದೀನಕ್ಕೆ ಯಾತ್ರೆಗೆ ತೆರಳಿದ್ದ ಇಲ್ಲಿನ ಕೊಡಂಗಲ್ಲು ನಿವಾಸಿ ಶನಿವಾರ ಹ್ರದಯಾಘಾತಕ್ಕೊಳಗಾಗಿ ಸಾವನಪ್ಪಿದ ಘಟನೆ ನಡೆದಿದೆ.ಮೃತ ವ್ಯಕ್ತಿ ಕೊಡಂಗಲ್ಲು ನಿವಾಸಿ ಹಾಮ್ಮದ್(73)ಎಂದು ತಿಳಿದು ಬಂದಿದೆ. ಇವರು ಎರಡು ವಾರಗಳ ಹಿಂದೆ ತನ್ನ ಕುಟುಂಬಿಕರ ಜತೆ ಮೆಕ್ಕಾ ಮತ್ತು ಮದೀನ ಕ್ಷೇತ್ರಕ್ಕೆ ಯಾತ್ರೆ ಹೊರಟಿದ್ದರು. ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶನಿವಾರ ಮಧ್ಯಾಹ್ನ ವಿಮಾನ ಮೂಲಕ ಮದೀನ ಸಮೀಪದ ಜಿದ್ದಾ ಏರ್ ಪೋರ್ಟ್ ಗೆ ಹೊರಡಲು
ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್‍ನ ಚುನಾವಣಾ
ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ
ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಬ್ಧಾರಿಗಳನ್ನು ನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ
ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇ.




























