Home Blog Left SidebarPage 456

ullala ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಸಾವು

ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್‌ ಕುಮಾರ್‌ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ ಗೇಟ್‌ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಟೋಲ್‌ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್‌ ಇದ್ದ

Kumble Sundar Rao : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ,

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾ‌ನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,

ಉಡುಪಿ ಆದರ್ಶ ಸಮೂಹ ಶಿಕ್ಷಣ ಸಂಸ್ಥೆ: ನರ್ಸಿಂಗ್ ಕಾಲೇಜಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್‌ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರ್ಸಿಂಗ್ ವೃತ್ತಿಯು ಸಮಾಜದ ಹಾಗೂ ಜನರ ಸೇವೆ ಮಾಡುವಂತಹ ಶ್ರೇಷ್ಠ

ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ ಬಿಜೆಪಿಯ ರಾಜಕಾರಣ. ಮುನೀರ್ ಕಾಟಿಪಳ್ಳ

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್

ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿ : ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪ

ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ ಸ್ವಾಗತಿಸಿದ್ದಾರೆ. ಮಂಗಳೂರು ರಾಜ್ಯದ ಎರಡನೇ ದೊಡ್ಡ ನಗರವಾಗಿದ್ದು ಹೀಗಾಗಿ ಬೆಂಗಳೂರು ಬಳಿಕ ಮಂಗಳೂರಿನಲ್ಲಿ

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು

ಕೊಲಂಬೊ : ಭಾರತೀಯ ಮೀನುಗಾರನ್ನುಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ ಕಾರ್ಯಾಚರಣೆ ನಡೆಸಿ ಭಾರೀಯ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ಕಂಕಸಂತುರೈ ಬಂದರಿಗೆ ಕರೆ

ರಾಂಕ್ ಸ್ಟೂಡೆಂಟ್ ಕಡಿಮೆ ಮಾರ್ಕ್ ಬಂದಿದ್ದಕ್ಕೆ ಆತ್ಮಹತ್ಯೆ

ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ ವಿಜ್ಞಾನ