ಉಜಿರೆ: ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ, ಕಲಿಕೆಯ ಜೊತೆ ಕೌಶಲ್ಯವೂ ಮುಖ್ಯವಾಗಿರುತ್ತದೆ, ಯಶಸ್ಸಿಗೆ ಓದು ಮಾತ್ರವಲ್ಲದೆ, ಬೇರೆ ಚಟುವಟಿಕೆಗಳೂ ಅಗತ್ಯ. ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸುವುಕೆಯಿಂದಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐ.ಟಿ ಮತ್ತು ವಿದ್ಯಾರ್ಥಿ ನಿಲಯದ ಸಿ.ಇ.ಒ ಪೂರಣ್ ವರ್ಮ ನುಡಿದರು. ಶ್ರೀ ಧ.ಮಂ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ
ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಪಡಿತರ ವಿತರಣಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಿಸಲಾಗುತ್ತಿಲ್ಲ. ಕಳೆದ 4 ದಿನದಿಂದ ಪಡಿತರದಾರರು ಕಾದು ಕಾದು ಸುಸ್ತಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 8 ಪಡಿತರ ವಿತರಣಾ ಕೇಂದ್ರದಲ್ಲಿ 8000 ಮಂದಿ ಪಡಿತರ ಕಾರ್ಡು ಹೊಂದಿದವರು ಇದ್ದಾರೆ. ಇಲ್ಲಿನ ಬಹತೇಕ ಕೇಂದ್ರದಲ್ಲಿ ಕಳೆದ 5 ದಿನದಿಂದ ಪಡಿತರ ಸಿಗದೆ ಜನರು ಕಾದು ಸುಸ್ತಾಗಿದ್ದಾರೆ. 70 ವರ್ಷ
ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು. ಬಳಿಕ ಸದಾನಂದ ಗೌಡ ಕನಸಿನ ಕೂಸಿಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಶಿಲಾನ್ಯಾಸ ನೆರವೇರಿಸಿದ್ದರು. ಆದ್ರೆ ಅಂದಿನಿಂದ ಇಂದಿನ ತನಕವೂ ಕಾಮಗಾರಿ ಕುಂಟುತ್ತಾ ಸಾಗಿ ಒಂದು ಹಂತಕ್ಕೆ ಬಂದು ನಿಂತಿದೆ.
ಉಡುಪಿ: ಫ್ಲ್ಯಾಟ್ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲಕ, ಆರೋಪಿ ಅಮೃತ್ ಶೆಣೈ “ವೈಜರ್ ” ಹೆಸರಿನ
ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದರು. ತಲಪಾಡಿ ಟೋಲ್ ಸಮೀಪ ಒಂದು ಕಂಟೈನರ್ ಲಾರಿಯನ್ನು ಚಾಲಕ ಶಮೀಮ್ ಚಹಾ ಕುಡಿಯಲೆಂದು
ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.
ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಭವಿಷ್ಯದಲ್ಲಿ ಬಿಫೋರ್ ಮೋದಿ ಆಫ್ಟರ್ ಮೋದಿ ಎಂಬ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಹಿಂದೆ ಆಕಾಶ ಭೂಮಿ




























