Home Blog Left SidebarPage 470

ಡೆತ್ ನೋಟು ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ‌ ಹತ್ಯೆಗೈದ ಯುವಕ.ನಿತಿನ್. ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ

ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ವಿವಿಧ ಯೋಗಾಸನದ ಭಂಗಿಗಳು

ಉಡುಪಿ : 9 ವರ್ಷಗಳ ಹಿಂದೆ ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಇಂದು ದೇಶ ವಿದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನ ಆಚರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಸ್ವತಃ ಯೋಗ ಪಟು. ತನ್ನ ದೈನಂದಿನ ಚಟುವಟಿಕೆಗಳ ನಡುವೆ ಸಮಯ ಸಿಕ್ಕಷ್ಟು ಕಾಲ ಶ್ರೀಗಳು ಯೋಗಾಭ್ಯಾಸ ಮಾಡುತ್ತಾರೆ. ತಮಿಳುನಾಡಿನ ಚೆನ್ನೈ ಪ್ರವಾಸದಲ್ಲಿರುವ ಪೇಜಾವರ

ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ. ಟಿ. ಎಂ. ಎ. ಪೈ ಅವರ 125 ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ

Mangaluru : ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಫ್ಯಾಷನ್ ಪ್ಲಸ್ ಬಿಡುಗಡೆ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‍ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ

ಪುತ್ತೂರು ತಾಲೂಕಿನ ಹಿರೇಬಂಡಾಡಿಯ ಆಶಾ ಕಾರ‍್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು.

ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ

ವಿ4 ನ್ಯೂಸ್‍ಗೆ 18ರ ಸಂಭ್ರಮ: ಯೆಯ್ಯಾಡಿಯ ಕಚೇರಿಯಲ್ಲಿ ಸಂಭ್ರಮಾಚರಣೆ

ಕರಾವಳಿ ಕರ್ನಾಟಕದಲ್ಲಿ ಮನೆಮಾತಾದ ವಿ4 ನ್ಯೂಸ್‍ಗೆ 18ರ ಸಂಭ್ರಮ. ಕಳೆದ 18 ವರ್ಷಗಳಿಂದ ಸುದ್ದಿ, ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪುನ್ನು ಮೂಡಿಸಿ ಎಲ್ಲರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ಸನ್ನು ಕಂಡಿದೆ. ಪ್ರತೀ ವರ್ಷ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿಯೂ ಕೂಡ ಕರಾವಳಿ ಭಾಗದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಯೆಯ್ಯಾಡಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್‍ಪಿಯಾಗಿ, ನಂತರ ್ದ ದಾವಣಗೆರೆಯ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ

ಮೂಡುಬಿದಿರೆ : ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ರೈತಸೇನೆ ಒತ್ತಾಯ

ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ “ಇಂದಿರಾ ಕ್ಯಾಂಟೀನ್” ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ ಸೇನೆ ಒತ್ತಾಯಿಸಿ ಸಭಾಪತಿ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಆಡಳಿತ ಸೌಧದ ಎದುರಿನಲ್ಲಿರುವ ಹಳೆಯ ತಾಲೂಕು ಕಚೇರಿಯ ಪಡಸಾಲೆಯು ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ

ಕಾಂಗ್ರೆಸ್‍ನಿಂದ ಬಟ್ಟಲು ಬಡಿದು ಪ್ರತಿಭಟನೆ 

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಟ್ಟಲು ಬಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಹಿಂದಿನ ಕಾಂಗ್ರೆಸ್

ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್ ಕಛೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ನವೀನ್ ಮುಂತಾದ ಮುಖಂಡರಿದ್ದರು.