ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮೋರಿಗೆ
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್‍ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್‍ನಲ್ಲಿ ಪದವಿ
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಗೊಳಿಸುವಂತೆ
ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ ಮೂಲಕ ದಳ್ಳಾಲಿಗಳಿಗೆ ಉತ್ತೇಜನ ನೀಡುವ, ಏಜೆಂಟರಿಗೆ ಅವಕಾಶ ಮಾಡಿಕೊಡುವ ಅವಕಾಶ ಕರ್ನಾಟಕ ರೈತರಿಗೆ ಮಾಡಿದ ಮೋಸವಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸ್ವಾತಂತ್ರ್ಯ ಬಂದ ಕೂಡಲೇ
ವಿಟ್ಲ: ಖಾಸಗಿ ಬಸ್‌ನ ಡ್ರೈವರ್ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು. ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ. ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು. ಅವರಿಗೆ ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರಿಗೆ ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಸಂಗ್ರಹಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ
ಉಳ್ಳಾಲ: ಯುವಕನೋರ್ವ ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.ರಶೀದಾ ಭಾನು ಎಂಬವರ ಪುತ್ರ ಮೊಹಮ್ಮದ್ ನೂಹ್ಮನ್ (19) ಆತ್ಮಹತ್ಯೆಗೈದವರು. ಖಿನ್ನತೆಗೆ ಒಳಗಾಗಿದ್ದ ನೂಹ್ಮನ್ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಐವರು ಸಹೋದರಿಯರಿಗೆ ಓರ್ವನೇ
ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ ಇವರ ನೂತನ ಆನಿಯಾ ದರ್ಬಾರ್ ಡಿಲಾಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಬಿ.ಸಿ.ರೋಡಿನ ಸ್ಮಾರ್ಟ್‍ಸಿಟಿ ಕಟ್ಟಡದ ನೆಲ ಅಂತಸ್ತಿನಲ್ಲಿ ಶುಭಾರಂಭಗೊಂಡಿತು. ಬಿ.ಸಿ.ರೋಡಿನಲ್ಲಿ ಈಗಾಗಲೇ ಆನಿಯಾ ದರ್ಬಾರ್ ಹೋಟೇಲ್ ಕಾರ್ಯಚರಿಸುತ್ತಿದ್ದು ಶುಚಿ ರುಚಿಯಾದ ಊಟೋಪಚಾರ ಹಾಗೂ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ತಾಲೂಕಿನಾದ್ಯಂತ ಮನೆಮಾತಾಗಿದೆ. ಇದೀಗ ಇದೇ ಸಂಸ್ಥೆಯ ಹವಾನಿಯಂತ್ರಿತ ಆನಿಯಾ ದರ್ಬಾರ್ ಡಿಲಾಕ್ಸ್ ಮಲ್ಟಿ
ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತರಲ್ಲಿ ಭಯದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು. ವೈದ್ಯಕೀಯ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಪೋಷಕರಲ್ಲಿ ಈ ವಿಂಗ್ ಆತಂಕಕ್ಕೆ ಕಾರಣವಾಗಲಿದೆ. ತಮ್ಮ ಮಕ್ಕಳನ್ನ ಕಾಲೇಜುಗಳಿಗೆ ಕಳುಹಿಸಲು
ಉಡುಪಿ ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷರು, ಸಮಾಜ ಮುಖಿ ಹೋರಾಟಗಾರ, ಸಂಘಟಕ, ಸಮಾಜದ ಮುಖಂಡ ಕಟಪಾಡಿ ಕೇಶವ ಭಂಡಾರಿಯವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೇಶವ ಭಂಡಾರಿ ಅವರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಸ್ಥಾಪಕ ನಿರ್ದೇಶಕರೂ, ಪ್ರಸ್ತುತ ಜಿಲ್ಲಾ ಸವಿತಾ ಸಮಾಜದ ಗೌರವ ಸಲಹೆಗಾರರಾಗಿ ಸೇವೆಯಲ್ಲಿ ಸಲ್ಲಿಸುತ್ತಿದ್ದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೇಶವ ಭಂಡಾರಿ ಅಂತ್ಯಕ್ರಿಯೆಯಲ್ಲಿ ಉಡುಪಿ ಜಿಲ್ಲಾ




























