ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ
ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. “ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 20-25 ವರ್ಷಗಳಿಂದ ಇಲ್ಲಿಯ ವರ್ತಕರು ವ್ಯಾಪಾರವನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ ಇಲ್ಲಿಯ ಅಧಿಕಾರಿಗಳು ಇಲ್ಲಿನ
ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಯಾಕ್ಸೋಫೋನ್ ಕಲಿಸಿಕೊಟ್ಟಿರುವ ಕೀರ್ತಿ ಅವರದ್ದು. ಸುಂದರ ಸೇರಿಗಾರ್
ಉಡುಪಿ : ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂನ್ 14 ರಂದು ಜರುಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು
ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ ಅಬ್ಬರ ಮುಂದುವರಿದಿದೆ. ಈ ಸಮಯದಲ್ಲಿ ನೀರಿಗೆ ಇಳಿಯುವುದು ಅಪಾಯಕಾರಿ. ಈ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್‌ನ ಒಂದು ಕಿಲೋ ಮೀಟರ್
ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ನಾವುಂದ, ಅಜ್ಜಿ ಮನೆ ಕನಸು ನನಸು ಮಾಡೋಣ ವಾಟ್ಸಾಪ್ ಗ್ರೂಪ್, ನಾಡ ಗ್ರಾ.ಪಂ ಹಾಗೂ ಪತ್ರಕರ್ತರ ಮಿತ್ರ ಸಹಕಾರದಿಂದ ಮಂಜುನಾಥ ನಿಲಯ
ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,
ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ
ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್ಡೆವಿಲ್ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ,
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ




























