ಬ್ರಹ್ಮಾವರ : ದೇವಾಲಯಗಳ ನಗರ ಬಾರಕೂರಿನಲ್ಲಿ ದೇವರ ಅಭಿಷೇಕಕ್ಕೆ ಕೂಡಾ ನೀರಿನ ಕೊರತೆ ಕಾಡುತ್ತಿದೆ. ಅತೀ ಪ್ರಾಚೀನ ಸೀಮೆಯ ಅಧಿ ದೇವರಾದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುರಾತನ ತೀರ್ಥ ಬಾವಿಯಲ್ಲಿ ನೀರು ಬತ್ತಿ ಹೋಗಿ ಅಭಿಷೇಕ ಪ್ರೀಯ ಶಿವನಿಗೆ ಕೂಡಾ ನೀರಿನ ಕೊರತೆ ಉಂಟಾಗಿದೆ. ದೇವಸ್ಥಾನದ ತೀರ್ಥ ಬಾವಿಯಲ್ಲಿ ಬೆಳಿಗ್ಗಿನ ಹೊತ್ತು ಅರ್ದ ಕೊಡಪಾನ
ಪುತ್ತೂರು: ಆಶ್ರಯ ಮನೆಯ ಆಸೆಯಲ್ಲಿ, ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಬಡ ಕುಟುಂಬವೊಂದು ಪುತ್ತೂರು ತಾಲೂಕಿನ ಮುಂಡೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯಾ ಎಂಬಲ್ಲಿದೆ. ಮನೆ ಇಲ್ಲದ ಕಾರಣ ಕಳೆದ ಮೂರು ತಿಂಗಳಿನಿಂದ ಈ ಕುಟುಂಬ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲಲ್ಲೇ ಬದುಕಬೇಕಾದ ಅನಿವಾರ್ಯ ಸ್ಥಿತಿಯಲ್ಲಿದೆ. ಕಡ್ಯ ಗ್ರಾಮದ ಮೋನಪ್ಪ ಎಂಬವರ ಕುಟುಂಬ ಆಶ್ರಯ ಮನೆಗಾಗಿ ಕಳೆದ ವರ್ಷ ಗ್ರಾಮ ಪಂಚಾಯತ್‍ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಮೋನಪ್ಪ
ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಪೊಳಲಿ ಪರಿಸರದಲ್ಲಿ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಮಳೆಗಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿತ್ತು. ಸಂಜೆಯ ವೇಳೆಗೆ ದೇವಸ್ಥಾನದ ಆವರಣದಲ್ಲಿ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದ ಭಕ್ತ ಜನ ಪುಳಕಿತರಾಗಿದ್ದು ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಅನುಗ್ರಹದಿಂದ ಮಳೆಯಾಗಿದೆ ಎನದನುವುದು ಭಕ್ತ ಜನರ ನಂಬಿಕೆ.
ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ
ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.
ಜನರ ನೀರಿನ ಬವಣೆ ತೀರಿಸಲೆಂದು ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ನಡೆಯುತ್ತಿರುವ “ಜಲ್ ಜೀವನ್” ಯೋಜನೆಯ ಪೈಪ್ ಲೈನ್ ಕಾಮಗಾರಿ ಜನರ ಜೀವ ತೆಗೆಯುತ್ತಾ ಎಂಬ ಮಾತು ಕೇಳಿ ಬರುತ್ತಿದೆ. ಬಹುತೇಕ ಕಡೆಗಳಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರನ ನಿರ್ಲಕ್ಷ್ಯ ದಿಂದಾಗಿ ಅಲ್ಲಲ್ಲಿ ಪೈಪ್ ಲೈನ್‌ಗಾಗಿ ರಸ್ತೆಗಳನ್ನು ಅಗೆದು ಹಾಕಿ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗುತ್ತಿರುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್
ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ ಚಂಡಾಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್




























