ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ
ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅರ್ಚಕ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ
ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು
ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ
ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ
ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.
ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ ಕರೆಸುವುದು ಮಾಡಬಾರದು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. ಸೋಮೇಶ್ವರ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿಚಾರವಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆಗೆ
ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ ವತಿಯಿಂದ ನಗರದ ಕ್ಲಾಕ್‍ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ
ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ ನಾಗರೀಕರ ಸಮುಚ್ಛಯದಲ್ಲಿ ನಡೆಯಿತು. ಪುಸ್ತಕ ಅನಾವರಣ ಮಾಡಿದ ಮುಂಬಯಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ತಾಳ್ತಜೆ ಮಾತನಾಡಿ, ಡಾ. ಬಡೆಕ್ಕಿಲ ಶ್ರೀಧರ್ ಭಟ್ ಅವರದ್ದು ವೃತ್ತಿಯಲ್ಲಿ ವಿಜ್ಞಾನ ಕ್ಷೇತ್ರವಾದರೂ
ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ




























