Home Blog Left SidebarPage 487

ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಖಾದರ್

ಉಳ್ಳಾಲ: ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು.

ಸುಳ್ಯ ಪದವು:ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ

ಬಜಪೆ:ಗಾಂಜಾ ಸೇವನೆ ಮಾಡುತಿದ್ದ ಇಬ್ಬರ ಬಂದನ

ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು ಬಗೆಯಲಾಗುತ್ತಿದೆ, ಬಣ್ಣ ಬಣ್ನದ ಸಿಮೆಂಟ್ ಕಟ್ಟಡಗಳ ನಡುವೆ ಪ್ರಕೃತಿಯ ಹಸಿರು ಕಾಣೆಯಾಗುತ್ತಿದೆ,ಮಾಲಿನ್ಯವು

ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ.ಜೀವನ ರಾಜ್ ಕುತ್ತಾರ್

 ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ

ಪಡುಬಿದ್ರಿ: ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಮೌನ: ಗ್ರಾಮಸ್ಥರ ಆಕ್ರೋಶ

ಪಡುಬಿದ್ರಿಯ ಜನತೆ ಕುಡಿಯುವ ನೀರಿಗಾಗಿ ಜನ ಒಂದು ಕಡೆ ಹಾಹಾಕಾರ ಪಡುತ್ತಿದ್ದರೆ, ಮತ್ತೊಂದು ಕಡೆ ನಿರಂತರವಾಗಿ ಕುಡಿಯುವ ನೀರು ಪೊಲಾಗುತ್ತಿದ್ದರೂ ನಿಗಾ ವಹಿಸಬೇಕಾಗಿದ್ದ ಗ್ರಾ.ಪಂ. ಅಧಿಕಾರಿಗಳು ಸಹಿತ ಆಡಳಿತ ಸಮಿತಿ ಮೌನವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲ್ಲಿ ಇಲ್ಲಿ ಅಲೆದಾಡುವ ಸ್ಥಿತಿ ಇದೆ. ಆದರೆ ಪಡುಬಿದ್ರಿ ಸರ್ಕಾರಿ ಬೋರ್ಡ್ ಶಾಲಾ ಮೈದಾನದ ಬಳಿಯ ಒವರ್ ಹೆಡ್ ಟ್ಯಾಂಕ್ ನಲ್ಲಿ

ಒಡಿಶಾ ರೈಲು ದುರಂತ: ಅಪಘಾತದ ಮೂಲ ಕಾರಣ ಪತ್ತೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತ ಪ್ರಕರಣಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288ಮಂದಿ ಮೃತಪಟ್ಟಿದ್ದು, 1100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ