ಉಳ್ಳಾಲ: ಟೊಯಿಂಗ್ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದರೋರ್ವರು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ರಾ.ಹೆ.66 ರಲ್ಲಿ ಶುಕ್ರವಾರ ಸಂಭವಿಸಿದೆ.ಉಳ್ಳಾಲ ಕಡೆಗೆ ತೆರಳುತ್ತಿದ್ದ ಟೋಯಿಂಗ್ ವಾಹನ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಅಂದಾಜು 70 ರ ಹರೆಯದವರಾಗಿದ್ದು, ಯಾವುದೇ ಗುರುತಿನ ಚೀಟಿಗಳು ಲಭ್ಯವಾಗಿಲ್ಲ.
ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದ ವ್ಯಕ್ತಿಗಳು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರೆ ಮೂರು ಜನರು ಹಲ್ಲೆಮಾಡಿದ
ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇವುಗಳ ಜಂಟಿ ನೇತೃತ್ವದಲ್ಲಿ ತಾ.06-06-2023ರಂದು ಮಂಗಳವಾರ ಸಂಜೆ 4.30ಕ್ಕೆ ನಗರದ ಕ್ಲಾಕ್ ಟವರ್
ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್ ಮೇಲೆ ಕುಳಿತು ನೇತಾಡುತ್ತಾ ನಿರ್ಲಕ್ಷ್ಯವಾಗಿ ವಾಹನದಲ್ಲಿ ಸಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈವೇ ನಲ್ಲಿ ಪ್ರವಾಸಿಗರ ತೀರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು
ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ನೂತನ ಶಾಖೆಯು ಬಂಟ್ವಾಳ ತಾಲೂಕಿನ ಪೆರ್ನೆ ಚಂದ್ರ ಆರ್ಕೇಡ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪರಮಪೂಜ್ಯ ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಪ್ರಜ್ವಲನೆ ಹಾಗೂ ಅಶೀರ್ವಚನ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕಚೇರಿ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಭದ್ರತಾ ಕೊಠಡಿ
ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೇತ್ರತ್ವದಲ್ಲಿ ನಡೆದ ಗೋವು ಪೂಜೆ ಹಾಗೂ ಗೋವು
ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ ಭಾಗದಲ್ಲಿ ಸಂಚರಿಸದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಜಲ್ಲಿಕಲ್ಲುಗಳು ಹೆದ್ದಾರಿ ಎಲ್ಲೆಡೆ
ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ
ನೂತನ NSUI ಜಿಲ್ಲಾ ಅಧ್ಯಕ್ಷರಾಗಿ ನೇಮಕ ಗೊಂಡಂತಹ ಸುಹಾನ್ ಆಳ್ವ ರವರು ಜೂನ್ 01 ರಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರ ಸಮ್ಮುಖದಲ್ಲಿ ಅಧಿಕಾರ ವನ್ನು ಸ್ವೀಕರಿಸಿದ್ದಾರೆ. ಸುಹಾನ್ ಆಳ್ವ ರವರು NSUI ರಾಜ್ಯ ಪ್ರದಾನ ಕಾರ್ಯದರ್ಶಿ ಯಾಗಿ ತುಮಕೂರು,ಉತ್ತರಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಸ್ತುವಾರಿಯಾಗಿ ಸೇವೆ ಯನ್ನು ಸಲ್ಲಿಸಿರುತ್ತಾರೆ. NSUI ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡು ವಿದ್ಯಾರ್ಥಿ ಕಾಂಗ್ರೆಸ್
ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ




























