Home Blog Left SidebarPage 491

ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿವಾಹಿತ ಬಳ್ಳಾರಿಯಲ್ಲಿ ಪತ್ತೆ

ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ 30 ರಂದು ಗರ್ಭಿಣಿ ಪತ್ನಿ ಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ನ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದಾರೆ.

ವಿದ್ಯುತ್ ಸ್ಪರ್ಶ : ನವಿಲ ರಕ್ಷಣೆಗೆ ಬಂತು ಆಂಬುಲೆನ್ಸ್

ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನವಿಲನ್ನು ಆ್ಯಂಬುಲೆನ್ಸ್ ನ ಮೂಲಕ ಉದ್ಯಾವರದ ಪಶುವೈದ್ಯ ಸಂದೀಪ್ ಶೆಟ್ಟಿ ಅವರ ಬಳಿ ಕೊಂಡೊಯ್ದು ಮಾನವೀಯತೆಯನ್ನು ಮೆರೆದಿದ್ದಾರೆ. ಆದರೆ, ನವಿಲನ್ನು ಪರೀಕ್ಷಿಸಿದ

ಶಾಲಾ ಪ್ರಾರಂಭೋತ್ಸವದಲ್ಲಿ ಉಡುಪಿ ಡಿಸಿ ಕೂರ್ಮಾರಾವ್ ಎಂ. ಭಾಗಿ

ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ

ಸರಕಾರ ಖಾಸಗಿ ಬಸ್ ಗಳ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ನಲ್ಲೂ ಉಚಿತ ಪ್ರಯಾಣ : ಉಡುಪಿ ಸಿಟಿ ಬಸ್ ಮಾಲಕರ ಸಂಘ

ಉಡುಪಿ : ರಾಜ್ಯದಾದ್ಯಂತ ಕಾಂಗ್ರೆಸ್ ನ ಭರವಸೆ ನೀಡಿದ ಗ್ಯಾರಂಟಿ ಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಸರಕಾರಿ ಬಸ್ ಮಾತ್ರ ಅಲ್ಲ, ಖಾಸಗಿ ಬಸ್ ಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ಮಾಡುತ್ತಿವೆ. ಇಲ್ಲಿ ಮಹಿಳೆಯರಿಗೆ ಸಮಸ್ಯೆ ಅಗುವ ಸಾದ್ಯತೆ ಇದೆ. ರಾಜ್ಯದಾದ್ಯಂತ 17

ಸೇವಾಭಾರತಿಯ ಚೇತನಾ ಬಾಲವಿಕಾಸ ಕೇಂದ್ರ – ಶಾಲಾ ಪ್ರಾರಂಭೋತ್ಸವ

ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು. ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ ಶಾಲೆಯವರಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮಥ್ರ್ಯದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಸುಧಾಕರ ಕೊಟಾರಿ,ಜನರಲ್ ಮ್ಯಾನೇಜರ್,ಕೆನರಾ

Mangaluru : ವಿಶ್ವ ರೆಡ್ ಕ್ರಾಸ್ ದಿನಾಚರಣೆ- ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣೆ

ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ

‘ಹೋದ್ರೆ ನನ್ನದೊಂದು ತಲೆಕೂದಲು ಮಾತ್ರ ಅಲ್ವಾ’ : ಸರ್ಕಾರದ 5 ಗ್ಯಾರಂಟಿಗಳ ಜಾರಿ ಬಗ್ಗೆ ಕುಯಿಲಾಡಿ ಮಾರ್ಮಿಕ ನುಡಿ

ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡಿತ್ತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೂರೈಕೆ ಮಾಡಿದರೆ ನಾನು ಕೆಪಿಸಿಸಿ ಕಚೇರಿ ಎದುರು ತಲೆ ಬೋಳಿಸಿ ಕೂತುಕೊಳ್ಳಲು ಸಿದ್ದನಿದ್ದೇನೆ ಎಂದು ಚುನಾವಣಾ ಸಂದರ್ಭದಲ್ಲಿ ಕುಯಿಲಾಡಿ ಸುರೇಶ್

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ| ಎಂ. ಎಸ್.ಮೂಡಿತ್ತಾಯ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಎಂ.ಎಸ್.ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ ಅವರು ನಿಟ್ಟೆಯಲ್ಲಿರುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೆಶಕರಾಗಿ, ಡಾ| ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ

‘ಕೇಂದ್ರ ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ’ : ಕುಸ್ತಿ ಪಟುಗಳ ಪರವಾಗಿ ಉಡುಪಿಯಲ್ಲಿ ಪ್ರತಿಭಟನೆ

ಹಲವು ದಿನಗಳಿಂದ ಭಾರತೀಯ ಮಹಿಳಾ ಕುಸ್ತಿ ಪಟುಗಳು ಭಾರತ ಕುಸ್ತಿ ಫೆಡರೇಶನ್ ನ ಅಧ್ಯಕ್ಷರಾದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ತೀವ್ರ ಪ್ರತಿಭಟನೆ ನಡೆಸುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ, ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಮೇ 31 ರ ಬುಧವಾರದಂದು ಪ್ರತಿಭಟಿಸಿವೆ. ಕರ್ನಾಟಕ ದಲಿತ

ಕಡಬ : ವಿದ್ಯುತ್ ಲೈನ್‍ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ