Home Blog Left SidebarPage 493

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ

ವಿಟ್ಲ : ವಿವಾಹಿತ ನೇಣ ಬಿಗಿದು ಆತ್ಮಹತ್ಯೆ

ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಬ್ರಹ್ಮಾವರ ರುಡ್ ಸೆಟ್‍ನಿಂದ ಸ್ವ ಉದ್ಯೋಗ ತರಬೇತಿ

ಬ್ರಹ್ಮಾವರದಲ್ಲಿ ರುಡ್ ಸೆಟ್ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರೀಗೆ ಸ್ವ ಉದ್ಯೋಗ ಮತ್ತು ಕಿರು ಉದ್ಯಮಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾನಾ ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸಹಕಾರದಲ್ಲಿ ಉಜಿರೆಯಲ್ಲಿ 1982ರಲ್ಲಿ ರುಡ್ ಸೆಟ್ ಗಳ ಪರಿಕಲ್ಪನೆಯಲ್ಲಿ ಮಾಡಲಾಗಿ ಬ್ರಹ್ಮಾವರದಲ್ಲಿ 1988 ಆರಂಭಗೊಂಡು ಸಹಸ್ರಾರು ಜನರೀಗೆ ಸ್ವಉದ್ಯೋಗದ ತರಬೇತಿ

ಚುನಾವಣೆ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಹೆಚ್ಚಿದ ಜವಾಬ್ದಾರಿ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಂಗಳವಾರ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್

ಬೆಂಕಿ ತಗುಲಿ ಮನೆ ಸಂಪೂರ್ಣ ಭಸ್ಮ – ಕಂಗಲಾಗಿರುವ ಕುಟುಂಬಕ್ಕೆ ಬೇಕಾಗಿದೆ ಸಹಾಯಹಸ್ತ.

ಆಲೂರು ಸಕಲೇಶಪುರ ವಿಧಾನ ಸಭಾ ವ್ಯಾಪ್ತಿಗೆ ಬರುವ ಹಾಸನ ಜಿಲ್ಲೆ ಕಟ್ಟಾಯ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಹೇಮಾವತಿ ಎಂಬುವವರ ಮನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಸಂಪೂರ್ಣ ಕರಕಲಾಗಿರುವ ಘಟನೆ ನಡೆದಿದೆ. ಮನೆಗೆ ಬೆಂಕಿ ತಗುಲಿ ಉರಿಯುತ್ತಿದ್ದಂತೆ ಗ್ರಾಮ ಜನರು ತಕ್ಷಣ ನೀರು ಹಾಕಿ ಬೆಂಕಿಯ ಕೆನ್ನಾಲಿಗೆ ತಿಳಿಗೊಳಿಸಲು ಹರಸಹಾಸಪಟ್ಟರು. ಘಟನೆಯಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ನಿತ್ಯ ಕೋಲಿ ನಂಬಿ ಜೀವನ ಸಾಗಿಸುತ್ತಿದ್ದ

ದ.ಕ. ಜಿಲ್ಲೆಯ ಕಡೆ 16 ಎನ್‍ಐಎ ದಾಳಿ

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಬುಧವಾರ ಬೆಳಗ್ಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವೇಣೂರು ಸೇರಿ ಒಟ್ಟು 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದ.ಕ ಜಿಲ್ಲೆಯ 16 ಕಡೆಗಳಲ್ಲಿ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ,ಮನೆ, ಕಚೇರಿ,ಹಾಗೂ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.ಕಳೆದ ಕೆಲ ಸಮಯದಿಂದ ಎನ್ ಐಎ ದಕ್ಷಿಣ ಭಾರತದ ಪಿಎಫ್ ಐ ಹವಾಲಾ ಹಣ ಜಾಲ

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ : ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ

ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮಣಿಪಾಲದ ಡಾ. ಟಿಎಂಎ ಪೈ ಹಾಲ್ ಒಂದರಲ್ಲಿ, ಮೇ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳು ಮತ್ತು ತಜ್ಞರು ಇಂತಹ ಉಪಕ್ರಮಗಳ ಪ್ರಾಮುಖ್ಯತೆಯನ್ನು

ಉಳ್ಳಾಲ: ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳುವುದಾಗಿ ತಿಳಿಸಿ ಹೋದವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”- ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಖ್ಯಾತ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ರಾ.ಹೆ. 66ರಲ್ಲಿ ಲಾರಿ ಪಲ್ಟಿ : ಗೇರುಬೀಜಗಳು ದಿಕ್ಕಾಪಾಲು

ಉಡುಪಿ ಜಿಲ್ಲೆ : ಮಂಗಳೂರಿನಿಂದ ಗೇರು ಬೀಜ ಹೇರಿಕೊಂಡ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ, ಇಂದು ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯಿತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ