ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಂದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನೆ
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ್ದರು. ಈ
ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್ ಅವರು, ಅವರು ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ,ಮೊಗವೀರಪಟ್ಣ,ಸುಭಾಷ್ ನಗರ, ಹಿಲೇರಿಯ ಮೊದಲಾದ
ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಗಂಭೀರ ಚರ್ಚೆ ಮಂಗಳೂರು ಮಹಾನಗರ ಪಾಲಿತೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ನವೀನ್ ಡಿಸೋಜ ನಗರದ ಬಹುತೇಕ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎತ್ತರದ ಪ್ರದೇಶಗಳಿಗೆ ನೀರು ಪೂರೈಕೆಯಾಗದೆ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಮಳೆಗಾಲ ಹತ್ತಿರವಾಗುತ್ತಿದ್ದು, ಚರಂಡಿಗಳ
ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.
ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಲಾಯಿತು.
ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ ಕೆಲಸದಾಕೆಯ ಜೊತೆಯಲ್ಲಿ ಈ ಶ್ವಾನ ಕೂಡ ಬಸ್ಸನ್ನೇರಿದೆ. ಈ ಮಹಿಳೆ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಾರೆ. ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನವೂ ಬಂದಿದೆ.ಆಕೆ ಬಸ್ ಹತ್ತುವಾಗ ಶ್ವಾನವೂ ಹತ್ತಿದೆ. ಬಸ್




























