ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ
ಉಡುಪಿ ಜಿಲ್ಲೆಯ ನಗರ, ಗ್ರಾಮೀಣ, ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಎಲ್ಲರೂ ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಆದರೆ ಕೆಲವೆಡೆ ಟ್ಯಾಂಕರ್ ನೀರಿನ ಸಮರ್ಪಕ ಪೂರೈಕೆ ಇಲ್ಲದೆ, ನೀರಿಗಾಗಿ ಜನರ ಪರದಾಟ ಹೆಚ್ಚಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ನಗರಸಭೆ ಪೌರಾಯುಕ್ತ ಆರ್ ಪಿ ನಾಯಕ್, ಮಣಿಪಾಲ, ಉಡುಪಿ ನಗರ ಪ್ರದೇಶ, ಅಂಬಲಪಾಡಿ ಗ್ರಾಮಾಂತರ, ಸಂತೆಕಟ್ಟೆ ಕೆಲವು ಕಡೆಗಳಲ್ಲಿ ನಾಲ್ಕೈದು ದಿನಗಳಿಂದ ನೀರಿಲ್ಲ.
ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ
ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ
ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ
ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು
ಬೈಂದೂರಲ್ಲಿ ನಡೆದ ಕಹಿ ಘಟನೆ ಜನರ ಮನದಿಂದ ಇನ್ನೂ ಮಾಸಿಲ್ಲ…ಇದೀಗ ಅಂಥಹುದೇ ಮರದ ಕಾಲು ಸೇತುವೆಯೊಂದು ಎಲ್ಲೂರು ಪಡುಬೈಲಿನಲ್ಲಿ ಬಲಿಗಾಗಿ ಕಾದು ಕುಳಿತಂತ್ತಿದೆ. ಮರದ ಕಾಲು ಸೇತುವೆಯಲ್ಲಿ ಭಯದಲ್ಲೇ ಹೋಗಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಎಚ್ಚೆತ್ತು ಕೂಡಲೇ ಸೂಕ್ತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಬೈಲಿನ ಜನರ ಬದುಕು ಒಂದು ರೀತಿಯಲ್ಲಿ ಗೃಹ ಬಂಧನವೇ ಸರಿ.




























