Home Blog Left SidebarPage 5

ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಗೆ “ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿಗೆ ಆಯ್ಕೆ

ಮೂಡುಬಿದಿರೆ: ಸಿಂಗಾಪುರದಲ್ಲಿ ನಡೆದ ಏಷ್ಯನ್ ಫೋಟೋಗ್ರಾಫಿಕ್ ಯೂನಿಯನ್ ಹಾಗೂ ಗೋಲ್ಡನ್ ಪಿಕಾಕ್ ಅವಾರ್ಡ್ ಸಿಂಗಪುರ್ ಜಂಟಿ ಆಶ್ರಯದಲ್ಲಿ ನಡೆದ “ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿಗೆ ಜಿನೇಶ್ ಪ್ರಸಾದ್ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆ ಮಾಡುವ ಮೊದಲು ವಿಶ್ವದ ವಾರ್ಷಿಕ ಟಾಪ್ ಟೆನ್ ಛಾಯಾಚಿತ್ರಗಾರ ಮತ್ತು

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ….. ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸನ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ ನಿರೋಧಕ ಕಾಯಿಲೆಯಾಗಿರುತ್ತದೆ. ಈ

ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ವಾಹನ ಅಪಘಾತದಲ್ಲಿ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ.

ಶಿರೂರು : ಟೂರಿಸ್ಟ್ ಕಾರಿನಲ್ಲಿ ಮೃತದೇಹ ರವಾನೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದುದ್ದನ್ನು ಶಿರೂರ್ ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ ತಡೆದು ನಿಲ್ಲಿಸಿದ ಘಟನೆ ನಡೆದಿದೆ.ಸ್ವಿಫ್ಟ್ ಡಿಜೈರ್ ಕಾರಿನ ಢಿಕ್ಕಿಯಲ್ಲಿ ಮೃತದೇಹವನ್ನು ಇರಿಸಿ ರವಾನೆ ಮಾಡುತ್ತಿದ್ದ. ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ವಾರೀಸುದಾರರು

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿ ಹಾಗೂ ಮಾರ್ಕೆಟ್ ನಲ್ಲಿ ಮಾರಾಟ ಮಾಡುತ್ತಿದ್ದರು. ರಾಸಾಯನಿಕ

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ ತ್ರಿಶಾ.ಎಸ್ ವಿದ್ಯಾರ್ಥಿನಿ 625ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದಿರುತ್ತಾಳೆ.

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಚಿತಾ ಎಸ್. ಸುವರ್ಣ 613

ಪಡುಬಿದ್ರಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ ಸುಮಾರಿಗೆ ಪಕ್ಕದ ಮನೆಯ ಅಂಗಳದಲ್ಲಿ ನಡೆದು ಹೋಗುವುದನ್ನು ಆ ಮನೆ ಮಂದಿ ನೋಡಿದ್ದರು. ಅಲ್ಲಿಂದ