Home Blog Left SidebarPage 513

ಮೂಡುಶೆಡ್ಡೆಯಲ್ಲಿ ನಡೆದ ಘರ್ಷಣೆ ಹಿನ್ನೆಲೆ : ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಬುಧವಾರ ಮತದಾನ ಮುಗಿದ ಬಳಿಕ ಕಾವೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ

ಉಳ್ಳಾಲ : ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಾವು

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಗೊಂದಲ : ಪೊಲೀಸರಿಂದ ಲಾಠಿಚಾರ್ಜ್

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಉಂಟಾದ ಗೊಂದಲಗಳಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೆÇಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.ಚಾರ್ಮಾಡಿಯ ಒಂದು ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಒಂದಿಷ್ಟು ವಿಳಂಬವಾಗಿತ್ತು. ರಾತ್ರಿ 7:20ರವರೆಗೂ ಇಲ್ಲಿ ಮತದಾನ ನಡೆದಿತ್ತು. ಆದರೆ ರಾತ್ರಿ 10:30 ದಾಟಿದರೂ ಮತಗಟ್ಟೆಯ ಅಧಿಕಾರಿಗಳು ಅಲ್ಲಿಂದ ತೆರಳಿರಲಿಲ್ಲ. ಇದರಿಂದ ಅನುಮಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ

ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ : ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ವಾಗ್ವಾದ

ಕಾರ್ಕಳ: ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆ ಬುಧವಾರ ರಾತ್ರಿ ನಡೆದಿದೆ. ಈ ಬಗ್ಗೆ ಮತಯಂತ್ರ ಹಾಗೂ ಚುನಾವಣಾ ಸಿಬ್ಬಂದಿ ಸಂಚರಿಸಬೆಕಾಗಿದ್ದ ಬಸ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು ನಕಲಿ ಮತದಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪೊಲೀಸರ

ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ

ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.

ಸಕಲೇಶಪುರ : 99 ವರ್ಷದ ವೃದ್ಧೆ ಸಿದ್ದಮ್ಮ ನಡೆದು ಕೊಂಡು ಬಂದು ಮತದಾನ

ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಇಂದು 90 ವರ್ಷ ಮೇಲ್ಪಟ್ಟ ವೃದ್ದೆಯರು ಮತದಾನ ಮಾಡಿದರು.ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಹಸಗವಳ್ಳಿಯ ರಂಗನಾಥ ಪ್ರೌಡಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ 99 ವರ್ಷದ ವೃದ್ಧೆ ಸಿದ್ದಮ್ಮ ನೆಡೆದು ಕೊಂಡು ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು. ಯಸಳೂರು ಹೋಬಳಿಯ ಚಂಗಡಹಳ್ಳಇ ಪಂಚಾಯತಿ ವ್ಯಾಪ್ತಿಯ ಬಸ್ಕಲ್ ಗ್ರಾಮದ 99 ವರ್ಷದ ವಯೋವೃದ್ಧ ಬಿಳಿಗಮ್ಮ ಮತ ಚಲಾವಣೆ ಮಾಡಿದ್ದು ವಿಶೇಷವಾಗಿತ್ತು.ಹಾಗೆ 97

ಹೆಜಮಾಡಿ : ಮತ ಚಲಾಯಿಸಿದ ಕೆಲವೇ ಹೊತ್ತಲ್ಲಿ ವೃದ್ಧೆ ವಿಧಿವಶ

ತನ್ನ ಹಕ್ಕನ್ನು ಚಲಾಯಿಸಿ ಮನೆಗೆ ತೆರಳಿದ 93ರ ಹರೆಯದ ವಯೋವೃದ್ದೆಯೊರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತರು ಹೆಜಮಾಡಿ ನಿವಾಸಿ ಮರಿಯಮ್ಮ 94 ವರ್ಷ ಮುಂಜಾನೆ ಹೆಜಮಾಡಿಯ ಪೇಟೆ ಸಮೀಪದ ಸರ್ಕಾರಿ ಶಾಲಾ ಬೂತಲ್ಲಿ ತನ್ನವರೊಂದಿಗೆ ವೀಲ್ಹ್ ಚಯರ್ ಸಹಕಾರದಿಂದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದರು. ವಿಶೇಷವೆಂದರೆ ವಯೋವೃದ್ದೆಯನ್ನು ಕಂಡ ಪೊಲೀಸ್ ಅಧಿಕಾರಿಯೋರ್ವರು ಹಿರಿಯರೆಂಬ ಕರುಣೆಯಿಂದ ಅವರನ್ನು ಮಾತನಾಡಿಸಿ ನೂರಾರು ದೇವರು ನಿಮಗೆ

ಮತದಾನದ ಹಕ್ಕನ್ನು ಚಲಾಯಿಸಿದ ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ

ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.