ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.
ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ
ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,
ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಕಾವು ಏರತೊಡಗಿದೆ. ಒಂದು ಕಡೆಯಿಂದ ಬಿಸಿಲಿನ ತಾಪ. ಇನ್ನೊಂದು ಕಡೆಯಿಂದ ಚುನಾವಣಾ ಪ್ರಚಾರದ ಕಾವು ಈ ಮಧ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ. ಸುನಿಲ್ ಕುಮಾರ್ ಅವರು ಮುಡಾರು ಗ್ರಾಮದ ಬಜೆಗೂಳಿಯಲ್ಲಿ ಪಾದಯಾತ್ರೆ ಮೂಲಕ ಮನೆಗಳಿಗೆ ಹಾಗೂ ಅಂಗಡಿ ಹೋಟೆಲ್ ಗಳಿಗೆ ಮತ್ತು ಗೇರು ಬೀಜದ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಬಳಿ ತಮ್ಮ ಅವಧಿಯಲ್ಲಿ ಆದ ಯೋಜನೆಗಳನ್ನು ಮನದಟ್ಟು ಮಾಡಿ ಇನ್ನು
ಉಜಿರೆ, ಏ.25: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟುನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವಮಾಮ್ ಇನ್ಸ್ಪೈರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮಾಧ್ಯಮದ ವಿವಿಧ ವಲಯಗಳಿಗೆ ಕಾಲೇಜಿನ ವಿದ್ಯಾರ್ಥಿಗಳಾದ ರಶ್ಮಿ ಯಾದವ್, ಶ್ಯಾಮಪ್ರಸಾದ್ ಎಚ್.ಪಿ (ಪತ್ರಿಕೋದ್ಯಮ ಪದವಿ ವಿಭಾಗ), ಚೈತ್ರಾ ರಾವ್,
ಬೆಳ್ತಂಗಡಿ ಕ್ಷೇತ್ರದ ಶಾಸಕರು ಬಿರುಸಿನ ಪ್ರಚಾರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಜೊತೆಗೆ ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಅವರು ಆರೋಪಿಸಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಗಂಭೀರ ಆರೋಪ ಮಾಡಿದರು. ಅವರು ಪ್ರಚಾರ ಮಾಡುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನ ಹಿಂದೆ 4 ಕಾರುಗಳು ಬೆಂಗಾವಲಾಗಿ ಹೋಗುತ್ತಿದ್ದು ಅದರಲ್ಲಿ ಒಂದು ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದು ಇದನ್ನು ನಾನು
ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದರು. ಒಳಚರಂಡಿ ವ್ಯವಸ್ಥೆ ಅಸಮರ್ಪಕ: ಸಾಕಷ್ಟು
ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಗುರುಗಳಾದ ಸಯ್ಯದ್ ಸಲೀಮ್ ತಂಗಳ್ ಸಬರಬೈಲು ಕಚೇರಿ ಉದ್ಘಾಟಿಸಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಮಾತನಾಡಿ, ಬೆಳ್ತಂಗಡಿಯಲ್ಲಿ ಜಾತ್ಯಾತೀತ ಜನತಾದಳ ಶಕ್ತಿಯಿದೆ. ಇಂದು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಕುಮಾರಸ್ವಾಮಿಯವರ ಆಡಳಿತ ಜನ ಮೆಚ್ಚಿದ್ದಾರೆ. ರಾಜ್ಯ ಸರ್ವ ಜನಾಂಗವು
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ
ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ



























