ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ರೋಡ್ ಶೋ ನಢಯುತು. ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ
ಕಾರ್ಕಳ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ ವಿಜಂಭಣೆಯಿಂದ ನಡೆಯಿತು.ಊರ ಪರವೂರ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರು, ದೇವಸ್ಥಾನದ ತಂತ್ರಿ ಹಾಗೂ ಅರ್ಚಕ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜಿ. ಎಸ್. ಬಿ. ಸಮಾಜದ ಭಾಂದವರು ಶ್ರೀ ವೆಂಕಟ್ರಮಣ ದೇವಸ್ಥಾನದ ರಥೋತ್ಸವ ದಲ್ಲೀ ಭಾಗಿಯಾದರು.
ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು ಭಾಗದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾರ್ಕಳ ಕ್ಷೇತ್ರವನ್ನು ಕಳೆದ
ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ
“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು ನಾಂದಿ ಹಾಡಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡುವಂತೆ ಜನರನ್ನು ಕೋರಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು




























