ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ, ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು
ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸ್ರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ದಯಾನಂದ ಹಾಗೂ ಭರತ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಬಾರ್ ನಿಂದ
ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ
ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ
2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಉಡುಪಿ ದ್ವಿತೀಯ, ಕೊಡಗು ತೃತೀಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ,
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತವಾದ ಬಳಿಕ ತೀವ್ರ ಅಸಮಾಧಾನದಿಂದಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಜೆಡಿಎಸ್‍ಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಅನ್ಯಾಯದ ಪರಮಾವಧಿ, ದುಡ್ಡಿನ ಮದ ಯಾರಿಗೂ ಇರಬಾರದು. ಇತಿಹಾಸವುಳ್ಳ
ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ




























