ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು. ನಾಮಪತ್ರ ಸಲ್ಲಿಸುವುದಕ್ಕೆ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು
ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮೊದಲು ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ
ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ
ಚುನಾವಣಾ ಪ್ರಚಾರ ಸಹಿತ ಇನ್ನಿತರ ಕಾರ್ಯಗಳಿಗೆ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.ಕೇಂದ್ರ ಸರಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯಂತೆ 18 ವರ್ಷ ಪ್ರಾಯದೊಳಗಿನ ಎಲ್ಲರನ್ನು ಮಕ್ಕಳು ಎಂದು ಪರಿಗಣಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ
ಪಡುಬಿದ್ರಿ ಸೇತುವೆ ಬಳಿ ಗದ್ದೆಗೆ ರಾತ್ರಿ ಬೆಂಕಿ ಬಿದ್ದ ಪರಿಣಾಮ ಬಹಳಷ್ಟು ತಾಳೆ ಮರಗಳು ಬೆಂಕಿಗಾಹುತಿಯಾಗಿದೆ.ಸುಮಾರು ಎರಡು ಗಂಟೆಗಳ ಕಾಲ ಬೆಂಕಿ ಉರಿಯುತ್ತಿದ್ದರೂ ಯಾವುದೇ ಅಗ್ನಿ ಶಾಮಕ ದಳವಾಗಲಿ, ಯಾವುದೇ ಅಧಿಕಾರಿಗಳಾಗಲಿ ಹತ್ತಿರ ಸುಳಿದಿಲ್ಲ. ಹೆದ್ದಾರಿ ಪ್ರಯಾಣಿಕರು ತಮ್ಮ ವಾಹನಗಳನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ಉರಿಯುತ್ತಿರುವ ದೃಶ್ಯವನ್ನು ವಿಡಿಯೋ ಚಿತ್ರೀಕರಣ ಮಾಡುವುದು ಬಿಟ್ಟರೆ ಅವರು ಅಸಹಾಯಕರಾಗಿದ್ದರು., ಪಕ್ಕದಲ್ಲೇ ವಿದ್ಯುತ್ ಕಂಬಗಳಿದ್ದು
ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ
ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಚ್ಚಿಲ ಭಾಸ್ಕರ ನಗರ ನಿವಾಸಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.ಅಬ್ದುಲ್ ರಹಿಮಾನ್ ಯಾನೇ ಆಸೀಫ್ ಹನಾನ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಎಂಇಪಿ ಪಾರ್ಟಿ ಮೂಲಕ ಚುನಾವಣೆ ಎದುರಿಸಿ 1713 ಮತಗಳನ್ನು ಪಡೆದಿದ್ದರು. ಬಳಿಕ 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಿ 6017 ಮತಗಳನ್ನು ಪಡೆದಿದ್ದರು
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ




























