Home Blog Left SidebarPage 618

ತುಳುನಾಡಿನಲ್ಲೊಂದು ಅಪರೂಪದ ನವಗುಳಿಗ ದೈವದ ಗಗ್ಗರ ಸೇವೆ…!

ಬೆಳ್ತಂಗಡಿ : ದೈವಸ್ಥಾನಗಳಲ್ಲಿಕ್ಷೇತ್ರಪಾಲ ದೈವವಾಗಿ ಒಂದು ಅಥವಾ ಎರಡು ಗುಳಿಗ ದೈವದ ಸಾನಿಧ್ಯವಿರುವುದು ಮಾಮೂಲಿ. ಗುಳಿಗ ನೀಚನೂ, ಉಗ್ರನೂ ಆದ ದೈವ. ಇಂತಹ ಗುಳಿಗನ ಕೋಲ ನೋಡಲೆಂದು ಭಾರೀ ಜನಸ್ತೋಮವೇ ಸೇರುತ್ತದೆ. ಆದರೆ ಇಲ್ಲೊಂದು ಕಡೆಗಳಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಒಂದೇ ಬಾರೀ ಕೋಲ ನಡೆಯುತ್ತದೆ. ಏನಿದರ ವಿಶೇಷವೆಂದು ನೋಡಲು ಈ ಸ್ಟೋರಿ ನೋಡಿ ಹೌದು..

ಕದ್ರಿ ಶ್ರೀ ಕಾಲಭೈರವ ದೇವಸ್ಥಾನ : ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ

ಮಂಗಳೂರು: ರಾಜರಾಜೇಶ್ವರ ತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್‍ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಾಥ ಪಂಥದ ಸಂಪ್ರದಾಯದಂತೆ ವೈಧಿಕ ವಿಧಿ ವಿಧಾನಗಳೊಂದಿಗೆ ಇಂದು (ಫೆ.6) ವಿದ್ಯುಕ್ತವಾಗಿ

`ಭಾರತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ’ : ಆರ್‍ಎಸ್‍ಎಸ್ ದಕ್ಷಿಣ ಪ್ರಾಂತ್ಯ ಸಹಕಾರ್ಯವಾಹ ಪಿ.ಎಸ್. ಪ್ರಕಾಶ್

ಮಂಗಳೂರು: ಭಾರತ ದೇಶ ಅತ್ಯಂತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ. ನಮ್ಮ ದೇವಸ್ಥಾನ, ಪದ್ಧತಿ, ಪರಂಪರೆಗಳು ಉಳಿಯಬೇಕಾದರೆ ಮೊದಲು ದೇಶ ಉಳಿಯಬೇಕು ಎಂದು ಹೊಸದಿಗಂತ ಪತ್ರಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಆರ್‍ಎಸ್‍ಎಸ್ ದಕ್ಷಿಣ ಪ್ರಾಂತ್ಯ ಸಹಕಾರ್ಯವಾಹ ಪಿ.ಎಸ್. ಪ್ರಕಾಶ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ

ಸಾಹಿತ್ಯ ಸಮ್ಮೇಳನದಲ್ಲಿ ಜನಮನ ರಂಜಿಸಿದ ಯಕ್ಷ ‘ಗಾನ’ ವೈಭವ

ಉಜಿರೆ, ಫೆ.6: ‌ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು. ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್ ಕಿಜಕ್ಕಾರ್ ಅವರ ಚೆಂಡೆಯ ನಾದ ಹಾಗೂ ಕಿಶನ್ ರಾವ್ ಅವರ ಚಕ್ರತಾಳ ದನಿಯೊಂದಿಗೆ ವಿದ್ಯಾರ್ಥಿನಿಯರಾದ ಹೇಮಾ,

ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ತಾಯಿಗೆ ಸ್ವರಾಭಿಷೇಕಗೈದ ‘ಸುಮಧುರ ಗೀತೆಗಳ ಗಾಯನ’

ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು. “ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ

ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಮಾಡಿದಾತ ಸೆರೆ: 14 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಯ ತಲೆಯ ಮೇಲೆ ರಾಡ್ ನಿಂದ ಹೊಡೆದು ಬಿದ್ದ ನಂತರ ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಕೊಲೆ ಮಾಡಿ ಬಂಧಿತನಾಗಿರುವ ವ್ಯಕ್ತಿ. ಈತ ಕಳೆದ ಶುಕ್ರವಾರದಂದು ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಎಂಬವರ ಮೇಲೆ ಟಿಪ್ಪರ್ ಹಾಯಿಸಿ

ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಾಹಿತ್ಯ ಸಮ್ಮೇಳನಕ್ಕೆ ತೆರೆ 

ಉಜಿರೆ, ಫೆ.6: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ಸಂಪನ್ನಗೊಂಡ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ರಂಗು ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಿತು. ಸಂಜೆ ಸಮ್ಮೇಳನದ ಸಮಾರೋಪದ ಬಳಿಕ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮದ ಮುಂಚೂಣಿಯಲ್ಲಿ ಮಂಗಳೂರು ಮತ್ತು ಉಜಿರೆಯ ವಿಶೇಷಚೇತನ ಮಕ್ಕಳ ಶಾಲೆ ‘ಸಾನಿಧ್ಯ’ದ ಮಕ್ಕಳಿಂದ ನಾಲ್ಕು ಕಾರ್ಯಕ್ರಮಗಳು

ತಲಪಾಡಿ ಟೋಲ್ ಸಿಬ್ಬಂದಿ ದೌರ್ಜನ್ಯ ವಿರುದ್ಧ ಧರಣಿ ಸತ್ಯಾಗ್ರಹ

ಉಳ್ಳಾಲ ( ಫೆ 6 ) : ಕರ್ನಾಟಕ – ಕೇರಳ ಗಡಿ ಪ್ರದೇಶವಾದ ತಲಪಾಡಿಯಲ್ಲಿ ನವಯುಗ ಟೋಲ್ ಪ್ಲಾಝಾ ಸಿಬ್ಬಂದಿಗಳ ಗೂಂಡಾಗಿರಿ ಮತ್ತು ದೌರ್ಜನ್ಯ ವಿರೋಧಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕೆಸಿರೋಡ್ ಇದರ ಆಶ್ರಯದಲ್ಲಿ ಟೋಲ್ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು. ಧರಣಿಯ ನೇತೃತ್ವವನ್ನು ಮಾಜಿ ತಾ.ಪಂ.ಸದಸ್ಯ ಸಿದ್ದೀಕ್ ಕೊಳಂಗರೆ ತಲಪಾಡಿ ವಹಿಸಿದ್ದರು. ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ ನಾಗರಿಕ ಹಿತರಕ್ಷಣಾ ವೇದಿಕೆಯ ಸಂಚಾಲಕ ಅಶ್ರಫ್ ಕೆಸಿ ರೋಡ್ ಕೆಲ

ಮಂಗಳೂರು- ರಾಷ್ಟ್ರೀಯ ಶಿಕ್ಷಣ ನೀತಿ : ವಿಚಾರ ಸಂಕಿರಣ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಒಳಿತಾಗುವುದೇ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಅಖಿಲ ಭಾರತ ಯುಜನ ಒಕ್ಕೂಟ , ಸಮದರ್ಶಿ ವೇದಿಕೆ , ಕರ್ನಾಟಕ ಥಿಯೋಲಾಜಿಕಲ್ ರಿಸರ್ಜ್ ಇನ್ಸಿಟ್ಯೂಟ್ ಸಹಯೋUದÀಲ್ಲಿ ವಿಚಾರಗೋಷ್ಠಿಯನ್ನು ನಡೆಯಿತು. ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯನ್ನು ಕೆ.ಟಿ.ಸಿ ಪ್ರಾಂಶುಪಾಲ ಪ್ರೊ.ಎಚ್.ಎಂ. ವಾಟ್ಸನ್ ಅವರು ಉದ್ಘಾಟಿಸಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆಬ್ರವರಿ 22, ಬುಧವಾರದಿಂದ ಆರಂಭಿಸಿ ಮಾರ್ಚ್ 05 ರವಿವಾರ ಪರ್ಯಂತವಾಗಿ ಸಂಪನ್ನಗೊಳ್ಳಲಿರುವ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆಯನ್ನು ಫೆಬ್ರವರಿ 6, 2023 ರ ಸೋಮವಾರದಂದು ಶ್ರೀ ಶೃಂಗೇರಿ ಶಾರದಾಪೀಠದಲ್ಲಿ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದ ಶ್ರೀಪಾದಂಗಳವರು, ಲೋಕ ಕಲ್ಯಾಣಾರ್ಥವಾಗಿ