Home Blog Left SidebarPage 640

ಬೆಂಗಳೂರಿನ ಚಿಕ್ಕಬಳ್ಳಾಪುರದಲ್ಲಿ 112 ಅಡಿಯ ಆದಿಯೋಗಿಯ ಮೂರ್ತಿ ಅನಾವರಣ

ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು

ಭಾರತೀಯ ಸನಾತನ ಪರಂಪರೆ ಅಮೂಲ್ಯವಾದದ್ದು : ಅಮೃತ ವೈಭವದಲ್ಲಿ ಸಂಪೂಜ್ಯ ಸ್ವಾಮೀ ಪೂರ್ಣಾಮೃತಾನಂದ ಪುರಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ “ಅಮೃತ ವೈಭವ” ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.ಅಮೃತಪುರಿಯಿಂದ ಆಗಮಿಸಿದ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ, ಟ್ರಸ್ಟೀ ಹಾಗೂ ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರಿಂದ,ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣರವರ ದಿವ್ಯ ಉಪಸ್ಥಿತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಭವ ಪೂರ್ಣವಾಗಿ

ಕಾಪು : ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾ.ಹೆ. 66 ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಗೂಡಂಗಡಿಯ ಮುಂಭಾಗ ಸಂಪೂರ್ಣ ನಜ್ಹುಗುಜ್ಜಾಗಿದ್ದು ಗೂಡಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಆರೋಪ, ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಹಾಗೂ ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ ಆರೋಪ – ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು. ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ, ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಪೋಸ್ಟ್ ಹಾಕುತ್ತಿದ್ದ ಆರೋಪ ಎದುರಿಸುತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ

ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಪದಾಧಿಕಾರಿಗಳ ಸಭೆ

ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಪದಾಧಿಕಾರಿಗಳ ಸಭೆಯು ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಹೊಸ ಸದಸ್ಯರಾಗಿ ಕಾರ್ತಿಕ್, ಆಶೀಶ್, ಆಕಾಶ್, ಅಕ್ಷಯ್ ಇವರನ್ನು ಮಂಡಲದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿಯವರು ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ನಂತರ ಮಾತಾನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಯುವಮೋರ್ಚಾದ

ದೇಶವನ್ನು ಅಭ್ಯುದಯದ ಪಥದಲ್ಲಿ ಮುನ್ನಡೆಸಲು ಯುವ ಸಮೂಹದಿಂದ ಸಾಧ್ಯ: ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್

ಧಾರವಾಡ, ಜ, 16; ಭಾರತ ಯುವ ಸಮೂಹದ ದೇಶವಾಗಿದ್ದು, ಯುವ ಜನಾಂಗವೇ ಭಾರತದ ಭವಿಷ್ಯ. ದೇಶವನ್ನು ಅಭ್ಯುದಯದ ಪಥದಲ್ಲಿ ಕೊಂಡೊಯ್ದು, ಉಜ್ವಲಗೊಳಿಸುವ ಸಾಮರ್ಥ್ಯ ಯುವ ಜನರ ಕೈಯಲ್ಲಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನಾಂಗ ಉತ್ತಮವಾಗಿ ಕೆಲಸ ಮಾಡಿದರೆ ಭಾರತ ಇನ್ನಷ್ಟು ಉತ್ತಮ ಸ್ಥಾನಕ್ಕೆ

ಬೈತುರ್ಲಿ : 32 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ

ನಗರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಪದವಿಪೂರ್ವ ವಾರ್ಡಿನ ಬೈತುರ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ 32 ಲಕ್ಷ ರೂಪಾಯಿ ವೆಚ್ಚದಲ್ಲಿ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್. ಅಂಗಾರರಿಂದ ಶಂಕುಸ್ಥಾಪನೆ

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,

ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ : ಆಚಾರ್ಯ ನಾಗಾರ್ಜುನ ವಿವಿ, ಕೇರಳ ಪ್ರೀ ಕ್ವಾರ್ಟರ್ ಫೈನಲ್‍ಗೆ

ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕೇರಳ ವಿವಿ, ತಮಿಳುನಾಡು ಚಿದಂಬರಂನ ಅಣ್ಣಾಮಲೈ ವಿವಿ ಮತ್ತು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿ ತಂಡಗಳು ಫ್ರಿ ಕ್ವಾರ್ಟರ್ ಫೈನಲ್‍ಗೆ ಪ್ರವೇಶಿಸಿವೆ. ಚೆನ್ನೈನ ಅಣ್ಣಾ ವಿವಿ, ತಮಿಳುನಾಡು ತಿರುಚಿನಾಪಳ್ಳಿಯ ಭಾರತಿದಾಸನ್ ವಿವಿ,

ನೇಪಾಳ, ರನ್‌ವೇಯಲ್ಲಿ 68 ಪ್ರಯಾಣಿಕರಿದ್ದ ವಿಮಾನ ಪತನ

ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್‌ವೇ ಸಮೀಪ ಪತನಗೊಂಡಿದೆ. ಪತನಗೊಂಡ