ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನಲ್ಲಿ
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಬ್ರಹ್ಮಮೊಗೇರ ಆರಾಧನಾ ಟ್ರಸ್ಟ್‍ನ ವತಿಯಿಂದ ಬ್ರಹ್ಮಮೊಗೇರೆರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮೊಗೇರ ದೈವಗಳ ದರ್ಶನ ಪಾತ್ರಿಗಳ ಸನ್ಮಾನ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಗದ್ದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ತುಳು ನಾಡು ಎಂಬುದು ಒಂದು
ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆಯ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳು: ಯು ಪದ್ಮನಾಭ ಶೆಟ್ಟಿ( ಗೌರವಾಧ್ಯಕ್ಷರು), ಕೆ.ವೇದವ್ಯಾಸ ಉಡುಪ, ಜೈಸನ್ ತಾಕೋಡೆ(ಉಪಾಧ್ಯಕ್ಷರು), ಡಾ.ರವೀಶ್ ಕುಮಾರ್ ಎಂ.( ಸಂಚಾಲಕರು), ದಯಾನಂದ ನಾಯ್ಕ್( ಜೊತೆ ಕಾರ್ಯದರ್ಶಿ), ಅಶೋಕ್ ಕಟೀಲ್( ಕೋಶಾಧಿಕಾರಿ) ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಸ್ವರಾಜ್ಯ ಮೈದಾನದ ಮಾರ್ಕೆಟ್ ನಲ್ಲಿ ಗುಜರಿ ಅಂಗಡಿಯಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗಿದೆ. ರಾಶಿ ಹಾಕಿರುವ ಗುಜರಿ ವಸ್ತುಗಳನ್ನು ತೆರವುಗೊಳಿಸುವಂತೆ ಸದಸ್ಯ ರಾಜೇಶ್ ನಾಯ್ಕ್ ಪುರಸಭಾ ಸಾಮಾನ್ಯ ಸಭೆಯಲ್ಲಿ ತಿಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಪುರಸಭಾ ಕಾರ್ಯಾಲಯದ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದರು.
ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ ವಕೀಲರು, ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ರೈ, ಹಾಗೂ ನಾರಾಯಣ್ ರೈ ಯವರನ್ನು
ಪುತ್ತೂರು :ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ, ಪ್ರಸ್ತುತ ವಿವಾಹಿತರಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ಪುಷ್ಪರೇಖಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ. ಪುಷ್ಪರೇಖಾ ಅವರು ರಸಾಯನ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರೊ. ಬಿ.ಕೆ. ಸರೋಜಿನಿ ಅವರ ಮಾರ್ಗದರ್ಶನದಲ್ಲಿ ರಸಾಯನ ಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ
ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಅಸ್ಗರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರು ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದರು.
ಮಂಗಳೂರು ನಗರದ ಅಮೃತ ವಿದ್ಯಾಲಯದಲ್ಲಿ ಜನವರಿ 8 ರಂದು ಜರುಗಿದ ವಿವಿಧ ವೈಶಿಷ್ಟ್ಯತೆಗಳ “ಅಮೃತ ಆರೋಗ್ಯ ಮೇಳ” ಅತ್ಯಂತ ಯಶಸ್ವಿಯಾಗಿ ನೆರವೇರಿತು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ತಪಾಸಣೆ ಮಾಡುವ ಆಧುನಿಕ ಉಪಕರಣ ಸಹಿತ ವಾಹನದಲ್ಲಿ Mammography ಹಾಗೂ Pap test ಸೌಲಭ್ಯಗಳನ್ನು ಉಚಿತವಾಗಿ ನೀಡಲಾಯಿತು. ಅಲ್ಲದೆ ಆಯುಷ್ಮಾನ್ ಭಾರತ್ ಕಾರ್ಡ್, ಕಣ್ಣಿನ ತಪಾಸಣೆ, ದಂತರೋಗ ಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ಮಕ್ಕಳ
ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ್ ಜಿ. ಭಿಡೆ ವಹಿಸಲಿದ್ದಾರೆ. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣ ಮಾಡಲಿದ್ದಾರೆ.
ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ ) ಇದರ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಬಳ್ಳಾಲ್ ಬಾಗ್




























