Home Blog Left SidebarPage 655

ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಕೋಟ್ಯಾನ್ ಚಾಲನೆ

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ

ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಅಕ್ರಮ ಮರಳು ಸಾಗಾಟ : ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪ

ರಾತ್ರಿ ಹೊತ್ತಿನಲ್ಲೇ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಅಕ್ರಮ ಮರಳು ಸಾಗಾಟದ ದಂಧೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪಿಸಿದೆ.ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ದಿನಾಕರ್ ಸುವರ್ಣ ಅವರು, ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹೊಂದಾಣಿಕೆಯಿಂದ, ಮರಳು ಸಿಗುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಯಾವ ಲಾರಿಗಳನ್ನು ವಶಕ್ಕೆ

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಅಪಘಾತ : ಕಾರು ಚಾಲಕ ದಿವಾಕರ್ ಶೆಟ್ಟಿ ಮೃತ್ಯು

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು

ಪ್ರಾಮಾಣಿಕತೆ ಮೆರೆದ ಸಿಟಿ ಬಸ್ ಸಿಬ್ಬಂದಿ : ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ವಾಪಸ್

ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಜ.1 ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಶಾಲಿಮಾರ್ 44ಸಿ ಬಸ್ಸಿನಲ್ಲಿ ಬಿಸಿರೋಡ್ ಮೂಲದ ಮಹಿಳೆ ತಸ್ಲಿಮಾ ಪ್ರಯಾಣಿಸುತ್ತಿರುವಾಗ 18 ಗ್ರಾಂ ತೂಕದ ಚಿನ್ನದ ಬಳೆಯನ್ನು ಕಳೆದುಕೊಂಡಿದ್ದರು.ಉಳ್ಳಾಲದ ತಾಜ್ ಮಹಲ್ ಸಭಾಂಗಣದಲ್ಲಿ ಮದುವೆ ಸಮಾರಂಭಕ್ಕೆ

ನವಮಿ ಡಾಟ್ ಕಾಮ್‍ನಿಂದ ವೈದ್ಯಕೀಯ ನೆರವಿಗಾಗಿ ಕ್ರಿಕೆಟ್ ಪಂದ್ಯಾಟ

ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ ಕ್ರೀಡಾಂಗಣದಲ್ಲಿ ಐಪಿಎಲ್ಪಿ ಮಾದರಿಯ ಕೊಡೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಹೊಸವರ್ಷದ ಮೊದಲ ದಿನ ನಡೆಯಿತು.ಕ್ಲಾಸಿಕ್ ಕ್ರಿಕೆಟರ್ಸ್ ವಿನ್ನರ್ ಹಾಗೂ ಎಂಡ್ ಪಾಯಿಂಟ್ ಕ್ರಿಕೆಟರ್ಸ್ ರನ್ನರ್ಸ್ ಆಗಿ ಹೊರ ಹೊಮ್ಮಿದರು. ಬೈಂದೂರು ತಾಲೂಕು ಬಿಜೆಪಿ

ಸಂಸದ ಬಿ.ವೈ ರಾಘವೇಂದ್ರ ಅವರ ಪೋಟೋಗ್ರಾಫರ್ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ. ಜನವರಿ 1 ರಂದು ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್ ಅವರು ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕನಕಪುರ ಗಾಮಾಂತರ ಪೆÇಲೀಸ್ ಠಾಣೆ

ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ಮಗ ಹರ್ಷ ಮೊಯ್ಲಿ ಸ್ಪರ್ಧಿಸುವುದಿಲ್ಲ : ಡಾ. ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ

ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ

6 ನೇ ತರಗತಿಯ ವಿದ್ಯಾರ್ಥಿ ಮೇಲೆ ಪೊಲೀಸ್ ಲಾಠಿಚಾರ್ಜ್

ನಗರದ ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೆÇಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, ” ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಕಿಡಿಕಾರಿದ ಘಟನೆ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿ ಮತ್ತು ಪಿಯು ವಿದ್ಯಾರ್ಥಿಗಳ ಮೇಲೆ ಕೂಡಾ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಗರಂ ಆಗಿದ್ದು ಪೊಲೀಸರ ವಿರುದ್ದ ತಿರುಗಿಬಿದ್ದಿದ್ದಾರೆ. ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ

ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ

ಬೆಂಗಳೂರು; ಹಿಂದೂ ಧರ್ಮದಲ್ಲಿ ಜಾತಿಯ ಮೇಲು ಕೀಳು ತಾರತಮ್ಯ ನಿವಾರಣೆಗಾಗಿ ಬೆಳಗಾವಿಯ ಗೋಕಾಕ ತಾಲ್ಲೂಕಿನ ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ ಆಯೋಜಿಸಿದ್ದು, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಜನ ಜಾಗೃತಿ ಮೂಡಿಸಲಾಗುತ್ತಿದೆ. ಹಿಂದೂ ಧರ್ಮದ ಉದಾತ್ತ ಚಿಂತನೆಗಳನ್ನು ಅಳವಡಿಸಿಕೊಂಡು ಎಲ್ಲಾ ಜಾತಿ, ಜನಾಂಗದವರು ಸಮಾನರು ಎಂಬುದನ್ನು ನಿರೂಪಿಸಲು ಇಂತಹ ಸಮಾವೇಶ

ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್ ನಲ್ಲಿ 01/01/2023 ಆದಿತ್ಯವಾರ ದಂದು ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .ಕಾರ್ಯಕ್ರಮದಲ್ಲಿ SFD ಮಂಗಳೂರು ವಿಭಾಗ ಸಂಚಾಲಕರಾದ ನಿಶಾನ್ ಆಳ್ವ ಕಾವೂರು, ಎಬಿವಿಪಿ ಮಂಗಳೂರು ತಾಲೂಕು