ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಮೂಲಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಡಿ. 14ರ ಪೂ.11ಕ್ಕೆ ರಾಜ್ಯಾದ್ಯಂತ ವರ್ಚ್ಯುವೆಲ್ ಮಾಧ್ಯಮದ ಮೂಲಕ 100 ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡುವರು. ಅದರಂತೆ
ಉಜಿರೆ, ಡಿ.12: ವೈಜ್ಞಾನಿಕ ವಲಯವನ್ನು ಪ್ರತಿನಿಧಿಸುವ ಯುವ ಪ್ರತಿಭಾನ್ವಿತರು ಔದ್ಯಮಿಕ ಕ್ಷೇತ್ರದ ಸಾಧ್ಯತೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಯೋಗಶೀಲ ಹೆಜ್ಜೆಗಳನ್ನಿರಿಸಿ ಯಶಸ್ಸು ಸಾಧಿಸುವ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಯುವರಸಾಯನಶಾಸ್ತ್ರಜ್ಞರ ವೇದಿಕೆಯಾದ
ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ. 24 ದಿನ ಪ್ರಾಯದ ನವಜಾತ ಶಿಶುವನ್ನು ಸ್ತನ್ಯಪಾನ ಮತ್ತು ಉಸಿರಾಟದ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಉಸಿರಾಡಲು ಕಷ್ಟಪಡುತ್ತಾ ಶ್ವಾಸೋಚ್ಛಾಸ ಮಾಡುವಾಗ, ಎದೆಹಾಲು ಕುಡಿಯುವಾಗ ಮೈ ನೀಲಿ ವರ್ಣಕ್ಕೆ ತಿರುಗುತ್ತಿತ್ತು. ಪರಿಸ್ಥಿತಿ ಗಂಭೀರವಿದ್ದುದರಿಂದ ನಗರದ ಏಕೈಕ ನವಜಾತ ಶಿಶುಗಳ ಹೃದಯ ತಜ್ಞರಾದ ಪ್ರಸ್ತುತ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.
ಮಂಗಳೂರಿನ ವೀ ಫೋರ್ ಟಿ.ವಿ. ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು.ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ್ಯಂತ 20 ಮಂದಿ ಪತ್ರಕರ್ತರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.ಹಿರಿಯ ಸಂಗೀತ ನಿರ್ದೇಶಕ
ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ
ಶಬರಿಮಲೆ ದೇವಾಲಯದಲ್ಲಿ ಜನಸಂದಣಿ ನಿಯಂತ್ರಣ ಮತ್ತು ವ್ಯವಸ್ಥೆ ಬಗ್ಗೆ ಚರ್ಚಿಸುವುದಕ್ಕಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸೋಮವಾರ ಮಧ್ಯಾಹ್ನ ಸಭೆ ಕರೆದಿದ್ದಾರೆ. ಏತನ್ಮಧ್ಯೆ, ಸೋಮವಾರ ಶಬರಿಮಲೆ ಅಯ್ಯಪ್ಪ ದರ್ಶನಕ್ಕಾಗಿ ದಾಖಲೆಯ ಬುಕಿಂಗ್ ನಡಿದಿದೆ. ಸೋಮವಾರ ದೇವರ ದರ್ಶನಕ್ಕಾಗಿ ಸರಿ ಸುಮಾರು 1,07,260 ಮಂದಿ ಬುಕ್ ಮಾಡಿದ್ದು, ಜನಸಂದಣಿ ನಿಯಂತ್ರಣಕ್ಕಾಗಿ ಹೆಚ್ಚುವರಿ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿ ಇಷ್ಟೊಂದು ಬುಕ್ಕಿಂಗ್
ರಾಜ್ಯದಲ್ಲಿ ಸುಮಾರು ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‍ನಿಂದ ಮುಕ್ತಗೊಳಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಹೇಳಿಕೆಗಳು ಕೇವಲ ರಾಜಕೀಯ ಮಾತ್ರ. ಆ ಬಗ್ಗೆ ಸುಪ್ರೀಂ ಕೋರ್ಟ್‍ನಿಂದ ಆದೇಶವಾಗಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಡೀಮ್ಡ್ ಫಾರೆಸ್ಟ್ ಸಮಸ್ಯೆ ಕುರಿತಂತೆ ಮಾತನಾಡಿದ ಅವರು,
ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ. ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು, ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ




























