Home Blog Left SidebarPage 688

ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ NIA ಗೆ ಹಸ್ತಾಂತರ

ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್‌ ಶಾರಿಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ

ಮಂಗಳೂರು ಪಾಲಿಕೆಯ ಸಾಮಾನ್ಯ ಸಭೆ : `ನನ್ನ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ’ ಎಂದ ಮೇಯರ್!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖುದ್ದು ಮೇಯರ್ ಕೂಡಾ ತಮ್ಮ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ ಎಂದು ಹೇಳುವ ಮೂಲಕ ಸಮಸ್ಯೆಯ

ಡಿಸೆಂಬರ್ 1 ರಿಂದ ಆರಂಭವಾಗಲಿದೆ ಡಿಜಿಟಲ್ ರೂಪಾಯಿ ವಹಿವಾಟು | ಏನಿದು ಡಿಜಿಟಲ್ ರೂಪಾಯಿ?

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್ 1 ರಿಂದ ರಿಟೇಲ್ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಗಾಗಿ ಪ್ರಾಯೋಗಿಕವಾಗಿ

ಮಂಜೇಶ್ವರ ಮತ್ತು ಉಪ್ಪಳ ಪರಿಸರದಲ್ಲಿ ಮಾದಕ ವಸ್ತು ಮಾರಾಟ : ಮೂವರನ್ನು ವಶಕ್ಕೆ ಪಡೆದ ಮಂಜೇಶ್ವರ ಪೊಲೀಸರು

ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್‍ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್ ನಾಸೀರ್ ಬಂಧಿತ ಆರೋಪಿಗಳು.ಠಾಣಾಧಿಕಾರಿ ಎ.ಸಂತೋಷ್ ಕುಮಾರ್ ಮತ್ತು ಎಸ್‍ಐ ರಜಿತ್ ನೇತೃತ್ವದ

ಸುಳ್ಯ: ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ

ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು

ಮುಂಬೈ ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದೆಬೆಟ್ಟು ಅವಿರೋಧ ಆಯ್ಕೆ

ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ . ನವಿ ಮುಂಬೈ ಲಯನ್ಸ್ ಕ್ಲಬ್_(NRI) ಸದಸ್ಯರು.

HEJAMADI TOLL ಹೆಜಮಾಡಿ ಟೋಲ್‍ನೊಂದಿಗೆ ಸುರತ್ಕಲ್ ಟೋಲ್ ವಿಲೀನಕ್ಕೆ ವಿರೋಧ

ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಈ ಟೋಲ್ ಗೇಟ್ ಗಳು ಅಸ್ತಿತ್ವಕ್ಕೆ ಬಂದಿದ್ದವುಗಳು, ಒಂದು ಟೋಲ್ ಗೇಟ್ ನಿಂದ ಮತ್ತೊಂದು ಟೋಲ್ ಗೇಟ್ ಗೆ 60 ಕೀ.ಮೀ. ಅಂತರ ಇರ

ullala ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಸಾವು

ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್‌ ಕುಮಾರ್‌ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ ಗೇಟ್‌ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಟೋಲ್‌ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್‌ ಇದ್ದ ಲಾರಿ ವಸಂತ್‌ ಅವರಿಗೆ ಢಿಕ್ಕಿ ಹೊಡೆದಿದೆ.ತಲೆಗೆ ಗಂಭೀರ ಗಾಯಗೊಂಡ ಅವರನ್ನು ಟೋಲ್‌ ಸಿಬ್ಬಂದಿ

Kumble Sundar Rao : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ,

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾ‌ನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,