Home Blog Left SidebarPage 691

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಹಿಂಜಾವೆ, ಭಜರಂಗದಳ, ದುರ್ಗಾವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ

ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ ಹೌಸ್ ನಿವಾಸಿ ಅಶೋಕ್ ಪೂಜಾರಿ (48), ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಇವರಿಗೆ ಇಬ್ಬರು ಮಕ್ಕಳು, ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು, ಸಮಾಜಕ್ಕೆ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ

ಹೆಜಮಾಡಿಯಲ್ಲಿ ಟೋಲ್ ಸುಂಕ ಹೆಚ್ಚಳ: ರಾಜಕೀಯ ರಹಿತ ಹೋರಾಟ: ಗುಲಾಂ ಅಹಮ್ಮದ್

ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸಲು ಮುಂದಾದ ಹೆದ್ದಾರಿ ಇಲಾಖೆಯ ಪ್ರಯತ್ನ ಯಾವತ್ತೂ ಫಲ

ಮೂಡುಬಿದರೆ: ಉದ್ಯಮಿ ರಾಜು ಕೆ. ನಿಧನ

ಮೂಡುಬಿದಿರೆ:  ಗಾಯಕ, ಉದ್ಯಮಿ ರಾಜು ಕೆ. (53) ಮೈಸೂರಿನ ತನ್ನ ನಿವಾಸದಲ್ಲಿ ರವಿವಾರ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಹೊನ್ನೆಲೆಗೆರೆ ಗ್ರಾಮದಲ್ಲಿ ಹುಟ್ಟಿದ  ರಾಜು ಮೂಡುಬಿದಿರೆಯ ಮೈನ್ ಶಾಲೆ,  ಜೈನ್ ಹೈಸ್ಕೂಲ್ ನಲ್ಲಿ ಓದಿ ಧವಲ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದ್ದರು.ಜಾನಪದ, ಭಾವಗೀತೆ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದ ಅವರು ಐ.ಕೆ. ಬೊಳುವಾರು ನಿರ್ದೇಶಿತ ಚದುರಂಗ

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022 : ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನಸೆಳೆದ ಮಕ್ಕಳು

ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.  ಅಡುಗೆ ಅನಿಲ ಸಿಲಿಂಡರ್‌ನಿಂದ ಲೀಕೇಜ್ ಆಗಿ ಆಗುವ ಸಂಭಾವ್ಯ ಅನಾಹುತ ತಪ್ಪಿಸುವ ಸಾಧನ, ದೃಷ್ಟಿ ದೋಷ ಇರುವವರಿಗೆ

ಮಂಗಳೂರು: ಮಂಗಳಾ ಆಸ್ಪತ್ರೆಯಲ್ಲಿ ನ್ಯೂರೊ ಉಪಕರಣ ಉದ್ಘಾಟನೆ

ನರರೋಗ ಮತ್ತು ಕಿವಿಮೂಗು ಗಂಟಲು ರೋಗ ಚಿಕಿತ್ಸೆಗಾಗಿ ಅತ್ಯಂತ ಸುಧಾರಿತ ಮೆಡ್ ಟ್ರೋನಿಕ್ ಸ್ಟೆಲ್ತ್ ಎಸ್-೮ ನಿರ್ಮಿತ ನ್ಯೂರೊ ಇಎನ್‌ಟಿ ನ್ಯಾವಿಗೇಶನ್ ಸಿಸ್ಟಂ ಉಪಕರಣವನ್ನು ನಗರದ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್‌ನಲ್ಲಿ ಉದ್ಘಾಟಿಸಲಾಯಿತು.  ಖ್ಯಾತ ವೈದ್ಯರಾದ ಡಾ. ರಾಜ, ಡಾ. ಶಂಕರ್ ಅತ್ಯಾಧುನಿಕ ಉಪಕರಣವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್‌ನ ನಿರ್ದೇಶಕರ ಡಾ. ಗಣಪತಿ

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ