ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಭಾನುವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.ತೆಲುಗು ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಕೃಷ್ಣ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ
ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಕೊನೆಗೂ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ. ಈ ಸಂಬಂಧ ಟ್ವಿಟರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ
ಬಂಟ್ವಾಳ : ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ. ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್‍ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು
ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ
ವಯೋವೃದ್ಧರೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರಗೆ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಸುಮಾರು 74 ವಯಸ್ಸಿನ ಮುಸ್ಲಿಂ ಸಮೂದಯದ ವಯೋವೃದ್ದರು ಇವರಾಗಿದ್ದು ಸ್ಥಳೀಯ ಆಸುಪಾಸಿನವರಾಗಿದ್ದಾರೆ ಎನ್ನಲಾಗಿದೆ . ರಸ್ತೆಗೆ ಎಸೆಯಲ್ಪಟ್ಟ ಇವರಿಗೆ ತಲೆಗೆ ಗಂಭೀರ ಹೊಡೆತ ಬಿದ್ದಿದೆ, ಹೊಡೆತದ ತೀವೃತೆಗೆ ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಉಡುಪಿ ನಗರದ
ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ ಉದ್ಘಾಟಿಸಿ, ಕೇಕ್ ಕತ್ತರಿಸಿ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಿಸಿ ಮಾತನಾಡಿದ
ಪಚ್ಚನಾಡಿ ಆಶ್ರಯ ಕಾಲೋನಿಯ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಶ್ರಮದಾನ ನಡೆಯಿತು. ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಊರ ಪರವೂರ ದಾನಿಗಳ ಕೊಡುಗೆಯಿಂದ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಎಲೆಕ್ಟ್ರಿಷನ್ ಹಾಗೂ ಪ್ಲಮ್ಬಿಂಗ್ ಕೆಲಸವು ಶ್ರಮದಾನದ ಮೂಲಕ ನಡೆಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಎಲೆಕ್ಟ್ರಿಷನ್ ಹಾಗೂ ಪ್ಲಂಬರ್ ಗಳಿಗೆ ಸೋಮವ್ವ ಕುಟುಂಬ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ)
ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ(ರಿ) ವತಿಯಿಂದ ನಡೆದ ಉಚಿತ ಇ-ಶ್ರಮ್ ಕಾರ್ಡ್ ಹಾಗೂ
ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ
ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ನಡೆದ ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ ನಾವುಂದ-ಬಡಾಕೆರೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ವಿನಯಾ ರಾಯ್ಕರ್ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜದ ಜನಾಂಗವು ರಾಜಕೀಯವಾಗಿ,ಸಮಾಜಿಕವಾಗಿ ಅಭಿವೃದ್ಧಿ ಹೊಂದಲು




























