ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದು (ನವೆಂಬರ್ 8) ಅವರು ಕೊನೆಯುಸಿರು ಎಳೆದಿದ್ದಾರೆ. ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಇನ್ಫೆಕ್ಷನ್ ಆಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನೇನು ಗುಣಮುಖರಾಗುತ್ತಾರೆ
ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ. ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ
ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ
ಮಂಗಳೂರು : ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ ಕಾರ್ಯಕ್ರಮವು ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾದಂದು ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗಟ್ಟಿ ಸಮಾಜದ ಹಾಗೂ ಊರವರ ಉಪಸ್ಥಿತಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.ಪ್ರಸ್ತುತ ಗಟ್ಟಿ ಸಮಾಜದ ನಾಯ್ಗರಾಗಿ ಕಾರ್ಯನಿರ್ವಹಿಸುತ್ತಿರುವ ಹರೀಶ್ಚಂದ್ರ ಗಟ್ಟಿ ಬೊಂಬಾಯಿಮನೆ ಹಾಗೂ ಮೇಲ್ಡರಾಗಿ ಕಾರ್ಯನಿರ್ವಹಿಸುತ್ತಿರುವ ಯಾದವ ಗಟ್ಟಿ ಪಿಲಾರ್ ಅವರಿಗೆ ಗಡಿ ಪ್ರಸಾದವನ್ನು ಪ್ರಧಾನ
. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೂಲತ: ಎರ್ಮಾಳು ತೆಂಕ ದವರಾದ ಇವರು ತಮ್ಮ ವಿದ್ಯಾಭ್ಯಾಸವನ್ನು ಊರಿನಲ್ಲಿ ಮುಗಿಸಿ ಮುಂಬೈಯಲ್ಲಿ ಉನ್ನತ ವ್ಯಾಸಂಗ ವನ್ನು ಮಾಡಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ ಕಂಪನಿ ಯಲ್ಲಿ 35 ವರ್ಷ ಉನ್ನತ ಹುದ್ದೆ ಯಲ್ಲಿ ಇದ್ದು ನಿವೃತ್ತಿಯನ್ನು ಹೊಂದಿರುತ್ತಾರೆ.ಮುಂಬೈ ಯಲ್ಲಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದು ಎರ್ಮಾಳು ತೆಂಕ ಮೊಗವೀರ ಸಭಾ ಮುಂಬೈ ಇದರ ಉಪಾಧ್ಯಕ್ಷರಾಗಿ ಕಾರ್ಯನಿರ್ವ ಹಿಸಿದ್ದು ಪ್ರಸ್ತುತ ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಮುಂಬೈ
ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ
ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಸಿಕೊಂಡ ವಾಸುದೇವ ಆರ್. ಕೋಟ್ಯಾನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮುಂಬಯಿಯಲ್ಲಿ ಇಂದು ಸಂಜೆ 7 ಗಂಟೆಗೆ ಜರುಗಲಿದೆ.




























