Home Blog Left SidebarPage 719

ಉಚಿತವಾಗಿ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮೂಲ್ಕಿ

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ

ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರುʼ ಹತ್ಯೆ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ NIA

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ

ಬಂಡೀಪುರ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ

ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ

ಸುರತ್ಕಲ್ ಟೋಲ್ ಗೇಟ್ : 5ನೇ ದಿನಕ್ಕೆ ಕಾಲಿಟ್ಟ ಧರಣಿ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ

ನವ ಮಂಗಳೂರು ಬಂದರು- ಕರ್ನಾಟಕ ರಾಜ್ಯೋತ್ಸವ ಆಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ ವಿಜಿಲೆನ್ಸ್ ಅಧಿಕಾರಿ ಮತ್ತು ಅಧ್ಯಕ್ಷರು, ಕಾರ್ಯದರ್ಶಿ ಕನ್ನಡ ಸಂಘದ ಗೌರವ

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ವತಿಯಿಂದ ಒಲವಿನ ಕರ್ನಾಟಕ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ

ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವೆಂಬರ್ ಒಂದರಂದು ಬೆಳಿಗ್ಗೆ ಪಕ್ಷದ ಗ್ರಾಮ

ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್

ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರದ ರವೀಂದ್ರ ಕಲಾಕ್ಷೇತ್ರದ ಮುಂಭಾಗ ಪ್ರತಿಭಟನೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆ

ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್‌.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು. ಜಿಲ್ಲಾ

ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ