ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ
ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು ಇಲ್ಲಿ ತನಕ ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ
ಉಳ್ಳಾಲ: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಇಂದು ಮದ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ಪಿಲಾರು ನಿವಾಸಿ ಶಿವಾನಂದ ಪೂಜಾರಿ ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರರೆ ಪತ್ನಿ ಶೋಭಾ ಪೂಜಾರಿ ಮೃತದೇಹ ಮನೆಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಧ್ಯಾಹ್ನ ಪುತ್ರ ಕಾರ್ತಿಕ್ ಎಂಬವರು ತಾಯಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಮೀಪದ ಮಹಿಳೆಯಲ್ಲಿ
ಮಂಜೇಶ್ವರ: ಮಂಗಲ್ಪಾಡಿ ಗ್ರಾಮ ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಥಳ, ಶಾಲಾ ಮದ್ರಸ ಪರಿಸರ ಸೇರಿದಂತೆ ಕಳೆದೆರಡು ವರ್ಷಗಳಿಂದ ರಾಶಿ ಬಿದ್ದು ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯ ಗಳ ಹಾಗೂ ಆಡಳಿತ ಸಮಿತಿಯ ಬ್ರಷ್ಟಾಚಾರದ ವಿರುದ್ಧ ಎಲ್ ಡಿ ಎಫ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಮಂಗಲ್ಪಾಡಿ ಪಂ. ಮುಂಬಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಿತು. ಪಂಚಾಯತು ಕಚೇರಿ ಮುಂಬಾಗದಲ್ಲಿ ನಡೆದ ಧರಣಿ ಸತ್ಯಾಗ್ರಹಕ್ಕೆ ಸಿಪಿಐಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕೆ
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ
ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೇ ಮನೆಯೊಂದರ ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡು ಭಯಭೀತಿ ಉಂಟುಮಾಡಿದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಮಲವಂತಿಗೆ ಗ್ರಾಮದಿಂದ ವರದಿಯಾಗಿದೆ. ಬುಧವಾರ ಬೆಳಗ್ಗೆ ಹಬ್ಬದ ಸಂಭ್ರಮದಲ್ಲಿದ್ದ ಮಲವಂತಿಗೆ ಗ್ರಾಮದ ತಾರಿದಡಿ ಬಾಬು ಗೌಡ ಅವರ ಮನೆಯ ಕಟ್ಟಿಗೆ ಸಂಗ್ರಹ ಮಾಡಿದ ಶೆಡ್ ನಲ್ಲಿ ಭಯಂಕರ ಉದ್ದದ ಕಾಳಿಂಗ ಸರ್ಪವೊಂದನ್ನು ಮನೆಮಂದಿ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಲಾಯಿಲ ಗ್ರಾಮದ
ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ
ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ
ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ




























