Home Blog Left SidebarPage 729

ಕಡಬ : ಮಾನಭಂಗ ಯತ್ನ ಪ್ರಕರಣ ಹಿನ್ನಲೆ – ಸಂತ್ರಸ್ತೆ ಮನೆಗೆ ಸಚಿವ ಎಸ್ ಅಂಗಾರ ಭೇಟಿ

ಕಾಣಿಯೂರು: ಬೆಡ್‌ಶೀಟ್ ಮಾರಾಟಕ್ಕೆಂದು ಕಾರಲ್ಲಿ ಬಂದಿದ್ದ ಇಬ್ಬರು ಆರೋಪಿಗಳಿಂದ ಮಾನಭಂಗ ಯತ್ನ ನಡೆದಿರುವ ಹಿನ್ನಲೆಯಲ್ಲಿ ಸಂತ್ರಸ್ತೆ ಮಹಿಳೆ ಮನೆಗೆ ಸಚಿವ ಎಸ್. ಅಂಗಾರ ಅ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆಡ್ ಶೀಟ್ ಮಾರಾಟಕ್ಕೆಂದು ಬಂದಿದ್ದ ಇಬ್ಬರು ಆರೋಪಿಗಳು ತನ್ನ ಮೇಲೆ ಮಾನಭಂಗ ಯತ್ನಿಸಿರುವ ಬಗ್ಗೆ ರಫಿಕ್ ಮತ್ತು ರಮೀಜುದ್ದೀನ್ ಎಂಬವರ ವಿರುದ್ಧ

ವಿಟ್ಲ: ಗುರುವಂದನಾ – ಕುಟುಂಬ ಸಮ್ಮಿಲನ

ವಿಟ್ಲ: ವಿಟ್ಲ ಅಕ್ಷಯ ಸಭಾಭವನದಲ್ಲಿ ಮೂರ್ಜೆ (ಮೂರ್ಕಜೆ) ನಂದರವoಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಇದೊಂದು ಔಚಿತ್ಯಪೂರ್ಣ ಕಾರ್ಯಕ್ರಮವಾಗಿದೆ. ಶ್ರದ್ದಾ ಭಕ್ತಿಯಿಂದ ಬದುಕಿದರೆ ಜೀವನಪಾವನವಾಗುತ್ತದೆ. ಗುರುವಿನ ಮಾತಿನಲ್ಲಿ ನಂಬಿಕೆ ಇಟ್ಟರೆ ಬದುಕು

ಕುಂದಾಪುರ: ಉದಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್‌ರಿಗೆ ಸನ್ಮಾನ

ಉದ್ಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್ ಅವರಿಗೆ ಲಯನ್ಸ್ ಕ್ಲಬ್ ನಾವುಂದ ಹಾಗೂ ಸಾರ್ವಜನಿಕರ ವತಿಯಿಂದ ಅದ್ದೂರಿ ಸನ್ಮಾನದ ಕಾರ್ಯಕ್ರಮವು ಮಾಲಸ ಮಾಂಗಲ್ಯ ಆರ್ಕೇಡಾ ಅರೆಹೊಳೆ ಕ್ರಾಸ್ ನಲ್ಲಿ ಸಡಗರ ಸಂಭ್ರಮದಲ್ಲಿ ನಡೆಯಿತು. ತನ್ನಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಇನ್ನೊಬ್ಬರಿಗೆ ಸ್ಪೂರ್ತಿದಾಯಕವಾಗಿರುವ ಅದೆಷ್ಟು ಕಲಾವಿದರನ್ನು ಬೆಳೆಸಿದ ಅತಿ ಕಿರಿಯ ಪ್ರತಿಭೆ ರಾಜೇಶ್ ಕೆರ್ಗಾಲ್ ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಇವರ ಸಿನಿಮಾ ತಂಡದಲ್ಲಿ ಕೆಲಸ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮುರ ಸಮೀಪ ರೈಲಿನಡಿಗೆ ವ್ಯಕ್ತಿಯೊಬ್ವರು ಬಿದ್ದು ಮೃತಪಟ್ಟ ಘಟನೆ ಅ.೨೩ ರಂದು ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು ಬಲ್ನಾಡಿನಲ್ಲಿ ವಾಸ್ತವ್ಯ ಇರುವ ವಿಜಯ ಗೌಡ(52) ಮೃತಪಟ್ಟವರು. ಅವರು ಮುರ ಗೌಡ ಸಮುದಾಯ ಭವನದಲ್ಲಿ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಬಂದವರು ಮುರ ರೈಲು ಹಳಿಯಲ್ಲಿ ಬರುತ್ತಿದ್ದ ರೈಲಿನಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆನ್ನಲಾಗಿದೆ.

ಕುಂದಾಪುರ : ದುಬೈನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ

ದುಬೈನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನ ಸಂದೀಪ್ ಶೆಟ್ಟಿ ಯುವಕರಿಗೆ ವಂಚಿಸಿದ ವ್ಯಕ್ತಿ. ಯುವಕರಿಂದ ಕೋಟ್ಯಂತರ ರೂಪಾಯಿ ಸಾಲ ಮಾಡಿಸುತ್ತಾನೆ, ಇಲ್ಲಿ ಇವನದೇ ಆದ ದೊಡ್ಡ ತಂಡ ಇದೆ. ಇವರಲ್ಲಿ ಹೆಚ್ಚಿನವರು ಪಾಕಿಸ್ತಾನದವರು, ಮೊದಲು ಬ್ಯಾಂಕ್ ಅಕೌಂಟ್ ಓಪನ್ ಮಾಡಿಸುತ್ತಾರೆ, ಆಮೇಲೆ ನಮ್ಮ ಹೆಸರಿನಲ್ಲಿ ಲೋನ್ ತೆಗಿಯುತ್ತಾರೆ, ನಂತರ ಯುಕರಿಗೆ ಅಲ್ಪ ಸ್ವಲ್ಪ ಮೊತ್ತ ನೀಡಿ ಭಾರತಕ್ಕೆ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಹಾಸನ : ಹಾಸನಾಂಬೆಯ ದರ್ಶನ ಪಡೆದ ಆನಂದ ಗುರೂಜಿ

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು. ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ ತಾಯಿಯ ಹಿನ್ನೆಲೆಯನ್ನು ಹೇಳುತ್ತಾ ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಹಿತವಚನವನ್ನು ಹೇಳಿದರು.

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಮಕ್ಕಳಿಲ್ಲದ ಪರಿಣಾಮ ಅದೇ ಕೊರಗಿನಲ್ಲಿ

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣ ಗುರು ಪೂಜೆಯ ಅರ್ಚಕರಾಗಿಯೂ, ಮೂಡುಬಿದಿರೆ ಅಯ್ಯಪ್ಪ ದೇವಸ್ಥಾನ ಸ್ಥಾಪಕರಾಗಿಯೂ ಸೇವೆ ಸಲ್ಲಿಸಿದವರು. ಅಯ್ಯಪ್ಪ ಗುರುಸ್ವಾಮಿಯಾಗಿ

ಮೂಡುಬಿದರೆ :ಸ್ವಾಭಿಮಾನದ ಬದುಕಿಗಾಗಿ ಸರಕಾರ ಬದ್ಧ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ಸ್ವ ನಿಧಿ ಪರಿಚಯ ಬೋರ್ಡ್ ಹಾಗೂ ಪ್ರಧಾನ ಮಂತ್ರಿಯವರ ಶುಭಾಷಯ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಕೇಂದ್ರ ವಸತಿ ಮತ್ತು