Home Blog Left SidebarPage 738

ವಿಟ್ಲ : ರೈಲಿನಡಿಗೆ ಬಿದ್ದು ಯುವಕ ಮೃತ್ಯು

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ

ಪಡುಬಿದ್ರಿ: ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ: ಸ್ಕೂಟರ್ ಬಿಟ್ಟು ಪಲಾಯಣ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೋಯ್ಯದಿದ್ದಾರೆ. ಹೆದ್ದಾರಿ ಪಕ್ಕದ ಬಾಡಿಗೆ ರೂಮ್‌ನಲ್ಲಿ ಹಾವೇರಿ ಮೂಲದ ಮಾಸಪ್ಪ ಎಂಬವರ ಕುಟುಂಬ ವಾಸವಾಗಿದ್ದು, ದಸರಾ ಹಬ್ಬಕ್ಕಾಗಿ ಕಳೆದ ಹದಿನೈದು ದಿನಗಳ ಹಿಂದೆ ರೂಮ್‌ಗೆ ಬೀಗ ಹಾಕಿ ಊರಿಗೆ ಹೋಗಿದ್ದು, ಭಾನುವಾರ ಮುಂಜಾನೆ ೫-೩೦ರ ಸುಮಾರಿಗೆ ರೂಮ್ ಕಡೆಗೆ ಬಂದಾಗ ಮಂದ ಬೆಳಕಿನಲ್ಲಿ ಮನೆಮಂದೆ ವ್ಯಕ್ತಿಯೊಬ್ಬರು ನಿಂತಿದ್ದು

ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ : ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಕುಡ್ಲ ರನ್ ಮ್ಯಾರಥಾನ್

 ಮಂಗಳೂರು: ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕುಡ್ಲ ರನ್ ಮ್ಯಾರಥಾನ್ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಿತು.  ಕುಡ್ಲ ರನ್‌ಗೆ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಕಾರ್ಡಿಯೋಲಜಿಸ್ಟ್ ಡಾ. ಪುರುಷೋತ್ತಮ್, ಕಾರ್ಡಿಯೋಲಜಿಸ್ಟ್ ಡಾ. ಮಂಜುನಾಥ್ ಬಿ ವಿ, ಕಾರ್ಡಿಯೋ ತೆರಪಿ ಸರ್ಜರಿ ಡಾ. ಜಯಶಂಕರ್ ಮಾರ್ಲ ಸೇರಿ ಚಾಲನೆ ನೀಡಿದರು.

ಸುರತ್ಕಲ್ ಟೋಲ್‌ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ: ಹಲವು ಮುಖಂಡರಿಗೆ ನೋಟಿಸ್

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ

ಹಾಸನ ಜಿಲ್ಲೆಯ ಅರಸೀಕೆರೆ ಬಳಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು 50 ವರ್ಷದ ಲೀಲಾವತಿ, 33 ವರ್ಷದ ಚೈತ್ರಾ, 10 ವರ್ಷದ ಸಮರ್ಥ್, 12 ವರ್ಷದ ದೀಪ್ತಿ, 10 ವರ್ಷದ

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ

ಉಳ್ಳಾಲ: ಪದ್ಮಶ್ರೀ ಪುರಸ್ಕೃತ 102 ರ ಹರೆಯದ ಸಾಲುಮರದ ತಿಮ್ಮಕ್ಕ  ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ  ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ  ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲರಿಗೂ ಒಳಿತನ್ನು ದೈವಶಕ್ತಿಗಳು ಕರುಣಿಸಲಿ. ದೇಶಕ್ಕೆ ಬಾಧಿಸಿರುವ ಸಾಂಕ್ರಾಮಿಕ ದೂರವಾಗಲಿ. ಎಲ್ಲರೂ ಪರಿಸರದೊಂದಿಗಿನ ಕಾಳಜಿಯ ಜೊತೆಗೆ ಸುಖಕರ ಜೀವನ ನಡೆಸಲಿ. ಪ್ರಕೃತಿ ಆರಾಧನೆಯೇ ದೈವಾರಾಧನೆ ಎಂದರು.

ಮೂಡುಬಿದರೆ: ದಸರಾ ಯೋಗೋತ್ಸವ ಸಮಾರೋಪ

ಮೂಡುಬಿದಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಪಿ.ಟ್ರಸ್ಟ್ (ರಿ), ಮೂಡುಸಿದಿರೆ ಇವುಗಳ ವತಿಯಿಂದ ತಾಲೂಕಿನ ೮೦ ಕೇಂದ್ರಗಳಲ್ಲಿ 7 ದಿನಗಳ ಕಾಲ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ ನಡೆದ ಯೋಗ ಶಿಬಿರ ದಸರಾ ಯೋಗೋತ್ಸವ’ವು ಪಾಲಡ್ಕ, ಬ್ರಹ್ಮಶ್ರೀ ನಾರಾಯಣಗುರು ಜಿಲ್ಲವ ಸಂಘದಲ್ಲಿ ಶನಿವಾರ ಸಮಾಪನಗೊಂಡಿತು.

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್‌ಗೆ ಕಂಟೈನರ್ ಢಿಕ್ಕಿ, ಹಾನಿ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ. ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೈನರ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಹಾನಿಗೊಳಗಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಾರು ಕೊಂಡೊಯ್ಯುತ್ತಿದ್ದ ಕಂಟೈನರ್ ಮಾಣಿ ಬಳಿ ದಾರಿ ತಪ್ಪಿ ಪುತ್ತೂರು ರಸ್ತೆಯಲ್ಲಿ ಬಂದಿದ್ದು, ಈ ವೇಳೆ ಮಿತ್ತೂರಿನಲ್ಲಿ ರೈಲ್ವೆ

ಬೆಳುವಾಯಿಯಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ: ಹಲವು ಸಮಸ್ಯೆಗಳು ಇತ್ಯರ್ಥ

ಮೂಡುಬಿದಿರೆ: ಇಲ್ಲಿನ ತಾಲೂಕು ತಹಶೀಲ್ದಾರ್ ತಾಲೂಕು ಸತ್ಯಪ್ಪ ಸಚ್ಚಿದಾನಂದ ಕುಚನೂರು ಅವರು ಬೆಳುವಾಯಿ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹೂಡಿದರು. ಪಂಚಾಯತ್ ಅಧ್ಯಕ್ಷೆ ಸುಶೀಲಾ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪಂಚಾಯತ್‌ನ ಮಾಜಿ ಅಧ್ಯಕ್ಷ ರಾಘು ಪೂಜಾರಿ ಮಾತನಾಡಿ, ಮನೆಗಳ ಬಳಿ ಮರಗಳಿಲ್ಲದಿದ್ದರೂ ಡೀಮ್ಸ್ ಫಾರೆಸ್ಟ್ ಎಂದು ಪಟ್ಟಿಯನ್ನು ಕೊಟ್ಟಿದ್ದಾರೆ, ಇದಲ್ಲದೇ

ಕಾಶೀ ಮಠಾಧೀಶರ ಸಂಭ್ರಮದ ದಿಗ್ವಿಜಯ ಮಹೋತ್ಸವ

ಮಂಗಳೂರು: ನಗರದ ವೆಂಕಟ್ರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವೃತದಲ್ಲಿರುವ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿಗ್ವಿಜಯ ಮಹೋತ್ಸವ ಕಾರ್ಯಕ್ರಮ ಶನಿವಾರ ವೈಭವದಿಂದ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ದೇಶದ ನಾನಾ ಕಡೆಯಿಂದ ಆಗಮಿಸಿದ ಸಹಸ್ರ ಸಹಸ್ರ ಸಂಖ್ಯೆಯ ಭಕ್ತಾದಿಗಳು ಸಾಕ್ಷಿಯಾದರು. ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಚಾತುರ್ಮಾಸ್ಯ ಮೆರವಣಿಗೆ ಆರಂಭಗೊಂಡು ಮಹಾಮ್ಮಾಯ ದೇವಸ್ಥಾನ ರಸ್ತೆ, ಗದ್ದೆಕೇರಿ, ಮಂಜೇಶ್ವರ ಗೋವಿಂದ