Home Blog Left SidebarPage 826

ತಾತ್ಕಾಲಿಕವಾಗಿ 500 ಕೋಟಿ ರೂ. ತಕ್ಷಣ ಬಿಡುಗಡೆ : ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಭಾರೀ ಮಳೆಗೆ ಹಾಳಾಗಿರುವ ಮೂಲಭೂತ ಸೌಕರ್ಯಗಳನ್ನು ಮರು ಸ್ಥಾಪಿಸಲು ತಾತ್ಕಾಲಿಕವಾಗಿ 500 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿಯ ಬಗ್ಗೆ ಮಣಿಪಾಲದ ಜಿ.ಪಂ ಸಭಾಂಗಣದಲ್ಲಿ ಇಂದು ನಡೆಸಿದ ಸಮಗ್ರ ಸಮೀಕ್ಷಾ ಸಭೆಯ ಬಳಿಕ

ವಿಠ್ಠಲ್ ಭಟ್ ಅವರಿಗೆ ನುಡಿ ನಮನ ಕಾರ್ಯಕ್ರಮ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು ಹಾಗೂ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿ ಸ್ವರ್ಗಸ್ತರಾದ ವಿಠ್ಠಲ್ ಭಟ್ ಅವರಿಗೆ ನುಡಿ ನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವು ಹೆಜಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಆರೆಸ್ಸೆಸ್ಸಿನ ಜೇಷ್ಠ ಪ್ರಚಾರಕ ದಾ. ಮ. ರವೀಂದ್ರ ಮಾತನಾಡುತ್ತಾ ವಿಠ್ಠಲ ಭಟ್ಟರ ಸಮಾಜ ಸಮರ್ಪಿತ ಜೀವನವು ಪ್ರತಿಯೊಬ್ಬರಿಗೂ ಅನುಕರಣೀಯ ಎಂದರಲ್ಲದೆ ಅವರು ದೈವಭಕ್ತಿ ಮತ್ತು

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು. ಭೂ ಕುಸಿತದಲ್ಲಿ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಆಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಕೇರಳದಿಂದ ಆಗಮಿಸಿದ್ದು ಪರಿಹಾರ

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು ಕಡಲ್ಕೊರೆತಕ್ಕೀಡಾದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು.ಕಳೆದ ಬಾರಿ 800 ಮೀ ದೂರ ಕಡಲ್ಕೊರೆತ ಸಂಭವಿಸಿದ್ದರೆ ಈ

ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಆರೋಪ : ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ರಾಜೀನಾಮೆಗೆ ಪಟ್ಟು

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ ಸಾಲ್ಯಾನ್ ಅವರಂತಹ ಹಿರಿಯ ಯಜಮಾನರು ಅಕಾಡೆಮಿ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರಗಳನ್ನು ಸಹಿಸಿಕೊಂಡಿರುವುದು ಅಚ್ಚರಿ ಮೂಡಿಸುತ್ತಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮನವಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ ಮುಖಾಂತರ ಬಿಎಸ್ಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಜಿಲ್ಲಾದ್ಯಕ್ಷರು ದಾಸಪ್ಪ ಎಡಪದವು, ಜಿಲ್ಲಾ ಸಂಯೋಜಕ ರು ಗೋಪಾಲ್ ಮುತ್ತೂರು , ವಿಮಲ.ಕೆ

ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಶೋಧ

ಕಳೆದ ಜು.6 ರಂದು ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುರುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಹೊಳೆಗೆ ಹಾರಿರುವ ಶಂಕೆಯಿರುವ ಯುವಕ 28 ವರ್ಷದ ಪುನಿತ್ ಈವರೆಗೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಪ್ರವೀಣ್ ಕುರ್ಕಾಲು, ಅಶೋಕ್ ದೆಂದೂರು ಕಟ್ಟೆ ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದ ವರಗೆ ಹುಡುಕಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ.

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ರಮಾನಾಥ ರೈ ಭೇಟಿ

ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವ ನೀಡಿದರು. ಈ ಸಂದರ್ಭ ಹಾನೀಗೀಡಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡರು. ಈ ಸಂದರ್ಭ