Home Blog Left SidebarPage 843

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ

ಎಸ್‌ಎಸ್‌ಎಫ್ ರಾಜ್ಯ ಪ್ರತಿಭೋತ್ಸವ

ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್‌ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ರೈಫಲ್ ಕ್ಲಬ್ 8 ಮಂದಿ ಸ್ಪರ್ಧಿಗಳು ಭಾಗಿ : ಮುಖ್ಯ ಕೋಚ್ ಮುಖೇಶ್ ಕುಮಾರ್

64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್‌ನ ಎಂಟು ಮಂದಿ ಶೂಟರ್‌ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2021 ರಲ್ಲಿ ಸ್ಮಾಲ್ ಬೋರ್ ರೈಫಲ್ ಈವೆಂಟ್‌ಗಳನ್ನು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾವು ಎಂಪಿ ಸ್ಟೇಟ್ ಶೂಟಿಂಗ್ ಅಕಾಡೆಮಿ ಶೂಟಿಂಗ್ ರೇಂಜ್‌ಗಳು, ಗೋರೆಗಾಂವ್, ಭೋಪಾಲ್‌ನಲ್ಲಿ ನವೆಂಬರ್

ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸಂಶೋಧನಾ ಬರಹಗಳ ಮೂಲಕ ನರ್ಸಿಂಗ್ ಪಾಂಡಿತ್ಯವನ್ನು ಬಲಪಡಿಸುವುದು

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಸಿಪಿಐಎಂ ರಾಜ್ಯ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಸಿಪಿಐಎಂ ರಾಜ್ಯ ಸಮಿತಿ ತೀರ್ಮಾನ ಪ್ರಕಾರ ಕೇರಳ ಎಲ್ಲಾ ಏರಿಯಾ ಕೇಂದ್ರಗಳಲ್ಲಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಉಪ್ಪಳ ಪೋಸ್ಟ್ ಆಫೀಸ್ ಎದುರುಗಡೆ ಧರಣಿ ಹಮ್ಮಿಕೊಳಲಾಯಿತು. ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕಾಂ ಕೆ ವಿ ಕುಂಞಿಹಿರಾಮನ್ ಧರಣಿ ಉದ್ಘಾಟಿಸಿದರು. ಅಬ್ದುಲ್ ರಝಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಬಾಲಕಿಯ ಹತ್ಯೆ ಪ್ರಕರಣ – 20 ಮಂದಿ ಪೊಲೀಸರ ವಶಕ್ಕೆ

ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು  20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ

Srinivas University : International Conference (ICARI-2021)

Srinivas University is a Private Research University in Mangalore, Karnataka, India established in 2013 by Karnataka State Act. Srinivas University has its flagship 18 Group of Institutions, initially started by A. Shama Rao Foundation, Mangalore, India, a private Charitable Trust founded in 1988 by an Eminent Chartered Accountant A. Raghavendra Rao. At present, Srinivas

ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರ ಸುಖ್‍ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‍ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.