ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್
ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ
ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್
75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್‌ನ ಕೇವಾಡಿಯವರೆಗೆ ಸೈಕಲ್ ರ್‍ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ನಿರತ ಯೋಧರನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯ ಮತ್ತು ಎನ್‌ಎಂಪಿಟಿ, ಎಂಆರ್‌ಪಿಎಲ್ ಇದರ ಸಿಐಎಸ್‌ಎಫ್ ಘಟಕಗಳು ಸ್ವಾಗತ ಕೋರಿ ಸಮ್ಮಾನಿಸಿ, ಶ್ಲಾಘನೆ
ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು
ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು
ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಳ್ಳಲು ಇನ್ನೂ ಕೂಡ ಸ್ವಾತಂತ್ರ್ಯ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಅವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋ.ರೂ. ವೆಚ್ಚದಲ್ಲಿ
ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.


















