ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ.
ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]
ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.
ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ ಆಡಳಿತದಿಂದ ಜನಸಾಮಾನ್ಯ ರು ಕಂಗಾಲಾಗಿದ್ದಾರೆ. ನಿರಂತರ ಬೆಲೆಯೇರಿಕೆಯಿಂದ, ನಿರುದ್ಯೋಗದ ಸಮಸ್ಯೆಯಿಂದ
ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕ್ರೀಡಪಾಟುಗಳು ಹಾಗೂ ಯುವ ಜನತೆಯಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ
ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್
ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ರಸ್ತೆಯನ್ನೂ
ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್‌ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು
ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ
ಅಸ್ಸಾಂ ಸರ್ಕಾರ ಬಡ 800 ಕುಟುಂಬಗಳ ಭೂಮಿಯನ್ನು ಅತಿಕ್ರಮಿಸುವ ಸಂದರ್ಭದಲ್ಲಿ ಪ್ರತಿಭಟಿಸಿದ ಸ್ಥಳೀಯರ ಮೇಲೆ ಸರ್ಕಾರಿ ಪ್ರಾಯೋಜಿತ ಪೋಲಿಸ್ ದಾಳಿ ಮೂಲಕ ಅಮಾಯಕ ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಿದನ್ನು ಖಂಡಿಸಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.


















