ಬಂಟ್ವಾಳ: ಕೆಎಸ್‍ಆರ್‍ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‍ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್
ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕುಮಾರ್ ಕುಡ್ತಡ್ಕ ಅವರ ಚೊಚ್ಚಲ ಸಾಹಿತ್ಯ ಕೃತಿ ಇದಾಗಿದ್ದು, ಬದುಕು ಬಹಳ ತೂಕದ್ದಾಗಿದ್ದು,
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಭಾಗಿತ್ವದಲ್ಲಿ ಲೆನ್ಸ್ ಕ್ಯಾಪ್ ಪಿಕ್ಚರ್ಸ್ ನಡೆಸುವ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಸೆ.5ರಂದು ತುಳು ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ತುಳು ಹಾಗೂ ಕನ್ನಡ ಭಾಷೆಯಲ್ಲಿ ಈ ನಟನಾ ತರಗತಿ ನಡೆಯಲಿದ್ದು ತುಳುವಿಗೆ ಆದ್ಯತೆ ನೀಡಲಾಗುತ್ತದೆ ಎಂದರು.ಮೂರು ತಿಂಗಳ ಕಾಲ
ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು, ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ ಬೈಕ್ ರೈಡರ್‍ಗಳ ಒಂಭತ್ತು ಮಂದಿಯ ತಂಡ ಕಲ್ಲಿಕೋಟೆಯಿಂದ – ನೇಪಾಳ ಪ್ರವಾಸವನ್ನು ಆರಂಭಿಸಿದೆ. ಆ.27 ರಂದು ಪ್ರವಾಸವನ್ನು ಆರಂಭಿಸಿದ ತಂಡ ಇಂದು ದೇರಳಕಟ್ಟೆಯನ್ನು ತಲುಪಿದೆ. ಅಲ್ಲಿಂದ ಐದು ಬೈಕುಗಳಲ್ಲಿ ಪ್ರವಾಸ ಮುಂದುವರಿಸಿದ ತಂಡ ಇಂದು ಗೋಕರ್ಣ ತಲುಪಿ ಅಲ್ಲೇ ಉಳಿಯಲಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ
ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ ಪ್ರಿಯ ಶ್ರೀಪಾದರು, ಕೃಷ್ಣಪುರ ಮಠದ ವಿದ್ಯಾ ಸಾಗರ ಶ್ರೀಪಾದರು, ಕಾಣಿಯೂರು ಮಠದ ವಿಶ್ವ ವಲ್ಲಭ ಶ್ರೀ
ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ ಸವಿದು, ಉಪಹಾರ ಮಾಡಿದರು. ನಗರಸಭೆ ಅಧ್ಯಕ್ಷರು ಪ್ರತಿ ದಿನ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಒಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಭಾವಿ ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್ ಹಾಗೂ ಹರ್ಯಾಣ ಮೂಲದ ಉತ್ಸವ್ ಮೃತಪಟ್ಟವರು
ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಪಟ್ಟ ಓರ್ವನನ್ನು ಮಧು (36) ಎಂದು ಹೇಳಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ್ ಅವರ ಜತೆ


















