ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿರುವ ಎಸ್‌ವಿಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ 625 ಅಂಕ ಪಡೆದುಕೊಂಡು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಇಲ್ಲಿನ ತ್ಯಾಗರಸ್ತೆಯ ನಿವಾಸಿ ಎನ್. ವೆಂಕಟೇಶ್ ಮಲ್ಯ ಹಾಗೂ ಎನ್.ರಾಧಿಕ ಮಲ್ಯ ಅವರ ಪುತ್ರರಾಗಿರುವ ಪ್ರತೀಕ್ ಮುಂದೆ ಉದ್ಯಮಿಯಾಗುವ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಅವರು 35 ಲಕ್ಷದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಾದ ಅಕಾಶಭವನ ಲಾಸ್ಟ್ ಸ್ಟಾಪ್ ಬಳಿ ಅಡ್ಡ ರಸ್ತೆ 15 ಲಕ್ಷ ,ಕಾಪಿಗುಡ್ಡೆ ಲಕ್ಷ್ಮಣ ನಾಯರ್ ಮನೆಯ ಬಳಿ ಕಾಂಕ್ರಿಟ್ ರಸ್ತೆ 10 ಲಕ್ಷ,ಮಂಜಲ ಕಟ್ಟೆ ಕಾಂಕ್ರಿಟ್ ರಸ್ತೆ ವಿಸ್ತರಣೆ 5 ಲಕ್ಷ ,ಶಿವನಗರ 4 ನೆಯ ಅಡ್ಡ ರಸ್ತೆಗೆ ಕಾಂಕ್ರಿಟ್ 5 ಲಕ್ಷದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ಹಾಗೂ ಕಾಪಿಗುಡ್ಡೆ ಶ್ರೀ ಅಯ್ಯಪ್ಪ […]
ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ ಕುಮಾರ್ ರೈ,ಜ್ಯೋತಿ ಪಿ ರೈ ದಂಪತಿ ಪುತ್ರಿಯಾಗಿದ್ದಾಳೆ.
ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ.ಅನನ್ಯ.ಎಂ.ಡಿ ಮತ್ತು ವೆನಿಸಾ ಶೆರಿನಾ ಡಿಸೋಜಾ ಈ ಸಾಧನೆ ತೋರಿದ ವಿದ್ಯಾರ್ಥಿನಿಯರಾಗಿದ್ದು, ಲಾಕ್ ಡೌನ್ ನಿಂದಾಗಿ ಶಾಲೆ ಮುಚ್ಚಿ ಸರಿಯಾದ ರೀತಿಯ ತರಗತಿ ನಡೆಯದ ಸಮಯದಲ್ಲೂ ತನ್ನ ಪರಿಶ್ರಮದಿಂದಾಗಿ ಈ ಸಾಧನೆ
ಬೆಂಗಳೂರು: ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯನ್ನು ಸ್ಥಗಿತೊಳಿಸಿದ್ದು, ಇದನ್ನು ಪ್ರತಿಭಟಿಸಿ ಬೆಂಗಳೂರಿನ ಟ್ವಿಟ್ವರ್ ಕಚೇರಿ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ
ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ
ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ ಉದ್ಯೋಗಕ್ಕೆ ಆಯ್ಕೆ ಮಾಡುವುದಾದರೆ ಜೆಒಸಿಯನ್ನು ಪಿಯುಸಿಗೆ ತತ್ಸಮಾನವೆಂದು ಕನಿಷ್ಠ ಶೈಕ್ಷಣಿಕ ಅರ್ಹತೆಯಾಗಿ
ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡು ದಿನ ಒಟ್ಟು 6 ಪರೀಕ್ಷೆಗಳು ನಡೆದಿತ್ತು. ನಾಲ್ವರು ವಿದ್ಯಾರ್ಥಿಗಳು ಪೋಷಕರ ಬೆಂಬಲ ಮತ್ತು ಶಿಕ್ಷಕರ ಪರಿಶ್ರಮದಿಂದ ಈ ಸಾಧನೆ ಸಾಧ್ಯ ಆಗಿದೆ ಎಂದು ನಾಲ್ಕು ವಿದ್ಯಾರ್ಥಿಗಳು ಹೇಳಿದ್ದಾರೆ.
2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ
ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು


















