ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ
ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ
ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,
ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ
ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ
ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ
ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿ ಯುವತಿಯ ಸಂಬಂಧಿಕರು ಯುವಕನ ಕುಟುಂಬದವರು ಯುವತಿಗೆ ವರದಕ್ಷಿಣೆ ಕಿರುಕುಳ
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ
ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ರೋಗಿಗಳ ಹೆಚ್ಚಳವಾಗುತ್ತಿರುವುದು ಅಲ್ಲಿಯಾ ಜನತೆ ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವುದರಿಂದ ಹೊರತು ಕೇರಳದಿಂದ ಸಾಗುವ ಜನತೆಯಿಂದಲ್ಲ.


















