Home Blog Left SidebarPage 956

ಕಾರವಾರ: ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.    

ಕೋವಿಡ್ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವ ಕೆಲಸವಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು

ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮಹಿಳಾ ಹಾಕಿ ತಂಡ

ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಮತ್ತು ಪುರುಷ ಹಾಕಿ ತಂಡ ಇತಿಹಾಸ ಬರೆದಿದೆ. ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿದ ಮರುದಿನವೇ ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ 22ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ನಂತರ ಸಮಬಲ ಸಾಧಿಸಲು ಆಸ್ಟ್ರೇಲಿಯಾ

ಮಂಗಳೂರಿನ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲದ ಉದ್ಘಾಟನೆ

ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬ್ಯಾಡ್ಮಿಂಟನ್‌ ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು

ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಆಟ ಹೊರತಂದ ಸಿಂಧೂ, ವಿಶ್ವದ ಮಾಜಿ 3ನೇ ಶ್ರೇಯಾಂಕಿತ ಆಟಗಾರ್ತಿ ಚೀನಾದ ಹಿ ಬಿಂಗ್‌

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.

ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

 ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ

ಪುತ್ತೂರಿನ ಕೆದಿಲ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ನಾಗರಿಕರಿಂದ ಮನವಿ

ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ ಗ್ರಾಮಸ್ಥರ ಬೇಡಿಕೆಯೂ ಆಗಿದೆ. ಎಲ್ಲಾ ಸಮುದಾಯದವರು ವಾಸಿಸುವ ಈ ಗ್ರಾಮದಲ್ಲಿ ಕೃಷಿಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಲವು ಶಾಲೆಗಳು ಕಾರ್ಯಾಚರಿಸುತ್ತಿವೆ. ಅಡಕೆ ಗಾರ್ಬಲ್‌ಗಳು ಇನ್ನಿತರ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ