Home Blog Left SidebarPage 968

ಶ್ರೀನಿವಾಸ್ ವಿವಿಯಲ್ಲಿ ಕೋವಿಡ್ ಲಸಿಕಾ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರ  ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌

ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್

ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ಶ್ರೀನಿವಾಸ್‌ ಆಸ್ಪತ್ರೆಯಲ್ಲಿ Duodenal Ulcer Perforation with Severe Respritory Distress ನ ಯಶಸ್ವೀ ಶಸ್ತ್ರಚಿಕಿತ್ಸೆ

ಶ್ರೀನಿವಾಸ್‌ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್‌ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ ಊದಿಕೊಂಡಿದ್ದು, ಉಸಿರಾಡಲು ಕಷ್ಟಪಡುತ್ತಿತ್ತು. ತಕ್ಷಣವೇ ಶ್ರೀನಿವಾಸ್‌ ಆಸ್ಪತ್ರೆಯ ವೈದ್ಯಕೀಯ

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಮಾರಾಟ ಆರೋಪ: ಬೈಂದೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶಾಲಾ ಮಕ್ಕಳಿಗೆ ವಿತರಿಸುವ ಅಡುಗೆ ಎಣ್ಣೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಹಕರೋರ್ವರು

ಪುತ್ತೂರಿನಲ್ಲಿ ಅಕ್ರಮ ಗೂಡಂಗಡಿಗಳ ತೆರವು: ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು