Home Blog Left SidebarPage 99

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್ ರವರು

ಜೂನ್ 30ರಂದು ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು. ಕಾರ್ಯಕ್ರಮವನ್ನು ಬೆಳಿಗ್ಗೆ

ದ.ಕ. ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಸಚಿವ ಕೃಷ್ಣಭೈರೇಗೌಡರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 14ನೇ ಸ್ಥಾನ: ರಶ್ಮಿತಾ ರಾಜು ಕುಲಾಲ್ ಉನ್ನತ ವ್ಯಾಸಂಗಕ್ಕೆ ಪ್ರತಿಷ್ಠಾನದಿಂದ 25 ಸಾವಿರ ನೆರವು

ಮಂಗಳೂರು: ಕರ್ನಾಟಕದ ರಾಜ್ಯದ ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರಾಂಕ್ ಮತ್ತು ಮಂಗಳೂರಿಗೆ 6ನೇ ರಾಂಕ್ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರು ವತಿಯಿಂದ ಸುಮಾರು 25 ಸಾವಿರವನ್ನು ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ ನೀಡಲಾಯಿತು.ಕುಲಾಲ ಪ್ರತಿಷ್ಠಾನದ ಸಮಾಜ ಕಲ್ಯಾಣ ಆಶ್ರಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ: ಜೀರ್ಣೋದ್ಧಾರಿ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲ ಕ್ಯೆ ಬಂಟ ಶ್ರೀ ಕಾಚು ಕುಜುoಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನ ವಾಗಿ ನಿರ್ಮಾಣ ವಾಗುತಿರುವ ಶ್ರೀ ಕಾಚು ಕುಜುoಬ ದೈವಸ್ಥಾನದ ಜೀರ್ಣೋಧಾರ ಸಮಿತಿ ಅಧ್ಯಕ್ಷರಾಗಿ ಶ್ರೀ ಪರಮೇಶ್ವರ ಗೌಡ ಬಿಳಿಮಲೆ, ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಬುಡೆಂಗಿ ಬಲ್ಪ ಹಾಗೂ ಕಾರ್ಯದರ್ಶಿ ಗಳಾಗಿ ಶ್ರೀ ಅನಂದ ಗೌಡ ಜಳಕದ ಹೊಳೆ ಆಯ್ಕೆಯಾದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ kanathur

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಓ.ಎಲ್‌.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪೋಷಕರು ನಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಬದ್ಧರಿದ್ದೇವೆ

ಸರ್ಕಾರಿ ಬಸ್ ಗಳ ನಡುವೆ ಅಪಘಾತ: ಓರ್ವ ಮಹಿಳೆ ಮೃತ್ಯು: 15ಕ್ಕೂ ಹೆಚ್ಚು ಮಂದಿಗೆ ಗಾಯ

ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಕೆಲವರ ಸ್ಥಿತಿ ಗಂಭೀರವಾಗಿದೆ. ಅರಂತೋಡು

ಮಂಗಳೂರು : ತುಳು ನಾಟಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ:ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆ

ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್